ನವದೆಹಲಿ: ನಿನ್ನೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿದ್ದ ಯಮುನಾ ನದಿಯ ನೀರಿನ ಮಟ್ಟ ನಿಧಾನವಾಗಿ ಇಳಿಮುಖವಾಗುತ್ತಿದ್ದರೂ ದೆಹಲಿಯ ಹಲವಾರು ಪ್ರದೇಶಗಳು ಜಲಾವೃತವಾಗಿವೆ. ಉಕ್ಕಿ ಹರಿಯುತ್ತಿರುವ ಯಮುನಾ ನದಿಯ ನೀರು ರಾಷ್ಟ್ರ ರಾಜಧಾನಿಯನ್ನು ಜಲಾವೃತಗೊಳಿಸಿದ್ದರಿಂದ ದೆಹಲಿ ಸರ್ಕಾರ ನಿನ್ನೆ ಶಾಲೆಗಳು, ಕಾಲೇಜುಗಳು, ಸ್ಮಶಾನಗಳು ಮತ್ತು ನೀರಿನ ಸಂಸ್ಕರಣಾ ಘಟಕಗಳನ್ನು ಮುಚ್ಚಲಾಗಿದೆ.
ಬೆಳಿಗ್ಗೆ 6 ಗಂಟೆಗೆ ಯಮುನಾ ನೀರಿನ ಮಟ್ಟವು 208.46 ಮೀಟರ್ಗಳಷ್ಟಿತ್ತು, ನಿನ್ನೆ ರಾತ್ರಿಯ 208.66 ಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. ಇಂದು ನೀರಿನ ಮಟ್ಟ ಕುಸಿಯಲಿದ್ದು, ಮಧ್ಯಾಹ್ನ 1 ಗಂಟೆ ವೇಳೆಗೆ 208.30 ಮೀಟರ್ ತಲುಪಬಹುದು ಎಂದು ಕೇಂದ್ರ ಜಲ ಆಯೋಗ ಮುನ್ಸೂಚನೆ ನೀಡಿದೆ.
ITO ಮತ್ತು ರಾಜ್ಘಾಟ್ನಲ್ಲಿರುವ ಪ್ರದೇಶಗಳು ಇನ್ನೂ ಮುಳುಗಡೆಯಾಗಿದ್ದು, ದೆಹಲಿ ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಇಲಾಖೆಯ ನಿಯಂತ್ರಕ ಇಂದ್ರಪ್ರಸ್ಥದ ಬಳಿ ಹಾನಿ ಉಂಟಾಗಿದೆ. ಇದು ಈಗಾಗಲೇ ಭೀಕರ ಪರಿಸ್ಥಿತಿಯನ್ನು ಉಲ್ಬಣಗೊಳಿಸಿದೆ. ನಗರದ ಮಧ್ಯ ಭಾಗದಲ್ಲಿರುವ ತಿಲಕ್ ಮಾರ್ಗ್ ಪ್ರದೇಶದಲ್ಲಿರುವ ಸುಪ್ರಿಂ ಕೋರ್ಟ್ಗೂ ಪ್ರವಾಹದ ನೀರು ತಲುಪಿದೆ.
ಇನ್ನೊಂದೆಡೆ ದೆಹಲಿ ಪ್ರವಾಹಕ್ಕೆ ಸಂಬಂಧಸಿದಂತೆ ರಾಜಕೀಯ ಜಟಾಪಟಿ ಆರಂಭವಾಗಿದೆ. ವಿಪತ್ತು ನಿರ್ವಹಣಾ ಪಡೆಯನ್ನು ನಿಯೋಜಿಸಿದ್ದರೆ ಆಪತನ್ನು ಮೊದಲೇ ತಡೆಯಬಹುದಿತ್ತು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಈ ಬಗೆಗಿನ ತನ್ನ ಸಲಹೆಯನ್ನು ಲೆಫ್ಟಿನೆಂಟ್ ಗವರ್ನರ್ ನಿರಾಕರಿಸಿದರು ಎಂದಿದ್ದಾರೆ. ಇನ್ನೊಂದೆಡೆ ಮಾತನಾಡಿರುವ ಲೆಫ್ಟಿನೆಂಟ್ ಗವರ್ನರ್, ಇದು ಒಬ್ಬರಿಗೊಬ್ಬರು ಬೆರಳು ತೋರಿಸುವ ಸಂದರ್ಭವಲ್ಲ, ಎಲ್ಲರ ಗಮನ ಆಪತ್ತು ನಿವಾರಣೆಯತ್ತ ಇರಬೇಕಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.