ನವದೆಹಲಿ: ವಾರಣಾಸಿ ಜಿಲ್ಲಾ ನ್ಯಾಯಾಲಯವು ಶುಕ್ರವಾರ ನಾಲ್ವರು ಹಿಂದೂ ಮಹಿಳೆಯರು ಜ್ಞಾನವಾಪಿ ಮಸೀದಿಗೆ ಪ್ರವೇಶ ಅನುಮತಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ್ದು, ವುಜುಖಾನಾ (ಮುಚ್ಚಿದ ಪ್ರದೇಶ) ಹೊರತುಪಡಿಸಿ ಸಂಪೂರ್ಣ ಜ್ಞಾನವಾಪಿ ಮಸೀದಿಯ ಆವರಣವನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ)ಗೆ ಪರಿಶೀಲಿಸುವಂತೆ ಆದೇಶಿದೆ.
ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ಈ ಮಸೀದಿಯನ್ನು ನಿರ್ಮಿಸಲಾಗಿದೆ. ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಹಿಂದೂ ಪರ ವಾದ ಮಾಡುತ್ತಿರು ವಿಷ್ಣು ಶಂಕರ್ ಜೈನ್ ಅವರು ಮಾಹಿತಿ ನೀಡಿದ್ದು, “ನನ್ನ ಅರ್ಜಿಯನ್ನು ಅಂಗೀಕರಿಸಲಾಗಿದೆ ಮತ್ತು ವಾಜು ಟ್ಯಾಂಕ್ ಹೊರತುಪಡಿಸಿ ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್ಐ ಸಮೀಕ್ಷೆಯನ್ನು ನಡೆಸಲು ನ್ಯಾಯಾಲಯವು ಸೂಚಿಸಿದೆ. 3 ರಿಂದ 6 ತಿಂಗಳೊಳಗೆ ಸಮೀಕ್ಷೆಯನ್ನು ಪೂರ್ಣಗೊಳಿಸಬಹುದು ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.
ವಾರಣಾಸಿ ನ್ಯಾಯಾಲಯದಲ್ಲಿ ಈಗ ನಡೆಯುತ್ತಿರುವ ಮೊಕದ್ದಮೆಯಲ್ಲಿ, ನಾಲ್ಕು ಹಿಂದೂ ಮಹಿಳೆಯರು ಜ್ಞಾನವಾಪಿ ಮಸೀದಿ ಆವರಣಕ್ಕೆ ವರ್ಷಪೂರ್ತಿ ಪ್ರವೇಶವನ್ನು ಅನುಮತಿಸುವಂತೆ ಕೋರಿ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ.
#WATCH | Gyanvapi case: Vishnu Shankar Jain, representing the Hindu side in the Gyanvapi mosque case, says, "I have been informed that my application has been approved and the court has directed to conduct an ASI survey of the Gyanvapi mosque complex, excluding the Wazu tank… pic.twitter.com/TX4hXzyZ5j
— ANI (@ANI) July 21, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.