ನವದೆಹಲಿ: ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಮಸೂದೆ, 2023 ಮಂಡನೆ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಬೆಂಬಲಿಸಲು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ಆರ್ ಜಗನ್ ಮೋಹನ್ ರೆಡ್ಡಿ ನಿರ್ಧರಿಸಿದ್ದಾರೆ,.
ರಾಷ್ಟ್ರ ರಾಜಧಾನಿಯ ಅಧಿಕಾರಶಾಹಿ ಯಂತ್ರದ ನಿಯಂತ್ರಣವನ್ನು ಕೇಂದ್ರಕ್ಕೆ ಹಸ್ತಾಂತರಿಸುವ ಸುಗ್ರೀವಾಜ್ಞೆಯನ್ನು ಬದಲಿಸಲು ಮಸೂದೆ ಮಂಡಿಸಲು ಕೇಂದ್ರ ಮುಂದಾಗಿದೆ. ಚುನಾಯಿತ ದೆಹಲಿ ಸರ್ಕಾರವನ್ನು ದುರ್ಬಲಗೊಳಿಸುವ ಮಸೂದೆಯ ವಿರುದ್ಧ ಮತ ಚಲಾಯಿಸುವಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಪ್ರತ್ಯೇಕವಾಗಿ ಎಲ್ಲಾ ಪಕ್ಷಗಳ ಪ್ರತಿನಿಧಿಗಳನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.
ಆದರೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ತಮ್ಮ ಸಂಸದರಿಗೆ ಮಸೂದೆಯನ್ನು ಸಂಸತ್ತಿನಲ್ಲಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ನಾವು ಮಸೂದೆಯನ್ನು ಬೆಂಬಲಿಸಲು ನಿರ್ಧರಿಸಿದ್ದೇವೆ ಎಂದು ಪಕ್ಷದ ಸಂಸದೀಯ ಪಕ್ಷದ ನಾಯಕ ವಿಜಯಸಾಯಿ ರೆಡ್ಡಿ ಹೇಳಿದ್ದಾರೆ. ದೆಹಲಿ ಪೂರ್ಣ ಪ್ರಮಾಣದ ರಾಜ್ಯವಾಗಿದ್ದರೆ ನಾವು ಎಎಪಿಯನ್ನು ಬೆಂಬಲಿಸುತ್ತಿದ್ದೆವು. ಈ ಸಂದರ್ಭದಲ್ಲಿ, ಅದು ಪೂರ್ಣ ರಾಜ್ಯವಲ್ಲ ಎಂದಿದ್ದಾರೆ.
ರಾಜ್ಯಸಭೆಯಲ್ಲಿ ಒಂಬತ್ತು ಮತ್ತು ಲೋಕಸಭೆಯಲ್ಲಿ 22 ಸದಸ್ಯರನ್ನು ಹೊಂದಿರುವ ವೈಎಸ್ಆರ್ ಕಾಂಗ್ರೆಸ್ ಪಕ್ಷವು ನಿರ್ಣಾಯಕ ಮಸೂದೆಗಳಲ್ಲಿ ಮೋದಿ ಸರ್ಕಾರವನ್ನು ಬೆಂಬಲಿಸುತ್ತಲೇ ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.