ಉಡುಪಿ: ಕಾಲೇಜಿನ ವಿದ್ಯಾರ್ಥಿನಿಯ ಶೌಚಾಲಯ ವಿಡಿಯೊ ಚಿತ್ರೀಕರಣ ಕುರಿತ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಇಂದು ಬೆಳಗ್ಗೆ ಉಡುಪಿಯ ನೇತ್ರಾ ಜ್ಯೋತಿ ಕಾಲೇಜಿಗೆ ಭೇಟಿ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಖುಷ್ಬೂ, ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆಯಾಗಬೇಕಾಗಿದೆ. ಕಾನೂನೂ ತನ್ನ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಯಾರು ಒತ್ತಡ ಹೇರಬಾರದು. ಸಂತ್ರಸ್ತೆ ಮತ್ತು ಆರೋಪಿ ಇಬ್ಬರನ್ನೂ ಭೇಟಿ ಮಾಡುತ್ತೇವೆ ಎಂದಿದ್ದಾರೆ.
ಈ ವಿಚಾರದಲ್ಲಿ ರಾಜಕೀಯ ನಡೆಯುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಸಂತ್ರಸ್ತೆ ಹಾಗೂ ಆಕೆಯ ಕುಟುಂಬವನ್ನು ಅರ್ಥಮಾಡಿಕೊಳ್ಳಬೇಕಾಗಿದೆ. ರಾಜಕೀಯ ಪಕ್ಷಗಳು ಇದರಲ್ಲಿ ಹಸ್ತಕ್ಷೇಪ ಮಾಡಬಾರದು. ತಾನೂ ಯಾವುದೇ ರಾಜಕೀಯ ಪಕ್ಷವೊಂದರ ಪರವಾಗಿ ಬಂದಿಲ್ಲ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಆಗಮಿಸಿದ್ದು, ತನಿಖೆಯ ನಂತರ ಸತ್ಯಾಂಶ ಹೊರಬರಲಿದೆ ಎಂದರು.
ಘಟನೆಯ ವಿಚಾರಣೆಯ ಭಾಗವಾಗಿ ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಘಟನೆಯಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳೊಂದಿಗೆ ಖುಷ್ಬೂ ಸುಂದರ್ ಇಂದು ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Kushbu Sundar at the place of inquiry in Udupi in connection with alleged voyeurism case @XpressBengaluru @vinndz_TNIE pic.twitter.com/N8SZMwC8PG
— Prakash (@prakash_TNIE) July 27, 2023
#WATCH | Udupi Video Incident | NCW (National Commission for Women) member Khushbu Sundar arrives at the college in Udupi, Karnataka to conduct an inquiry into the matter. pic.twitter.com/tHzwTjBmgE
— ANI (@ANI) July 27, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.