ನವದೆಹಲಿ: ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಶುಕ್ರವಾರ ಸಂಸತ್ತಿನಲ್ಲಿ ನಡೆಯುತ್ತಿರುವ ಗದ್ದಲವನ್ನು ನಿವಾರಿಸಲು ವಿವಿಧ ಪಕ್ಷಗಳ ಜೊತೆ ಸಭೆ ನಡೆಸಿದರು.
ಜುಲೈ 20 ರಂದು ಮುಂಗಾರು ಅಧಿವೇಶನಕ್ಕಾಗಿ ರಾಜ್ಯಸಭೆಯು ಸಭೆ ಸೇರಿದಾಗಿನಿಂದ ಪದೇ ಪದೇ ಅಡ್ಡಿಪಡಿಸಲಾಗುತ್ತಿದೆ. ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಮತ್ತು 267 ನಿಯಮದ ಅಡಿಯಲ್ಲಿ ಚರ್ಚೆಗೆ ವಿರೋಧ ಪಕ್ಷದ ಸದಸ್ಯರು ಪಟ್ಟು ಹಿಡಿದು ಗದ್ದಲ ನಡೆಸುತ್ತಿದ್ದಾರೆ.ಹೀಗಾಗಿ ಸದನವು ಕಾರ್ಯನಿರ್ವಹಿಸಲಿಲ್ಲ
“ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧಂಖರ್ ಅವರು ಮೇಲ್ಮನೆಯಲ್ಲಿನ ಬಿಕ್ಕಟ್ಟನ್ನು ಮುರಿಯುವ ಪ್ರಯತ್ನದಲ್ಲಿ ಇಂದು ತಮ್ಮ ಚೇಂಬರ್ನಲ್ಲಿ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ” ಎಂದು ಉಪರಾಷ್ಟ್ರಪತಿಗಳ ಕಚೇರಿ ತಿಳಿಸಿದೆ ಮತ್ತು ಸಭೆಯ ಚಿತ್ರಗಳನ್ನು ಹಂಚಿಕೊಂಡಿದೆ.
ಸಭಾನಾಯಕ ಪಿಯೂಷ್ ಗೋಯಲ್, ಸದನದ ಕಾಂಗ್ರೆಸ್ ಉಪನಾಯಕ ಪ್ರಮೋದ್ ತಿವಾರಿ ಮತ್ತು ಮುಖ್ಯ ಸಚೇತಕ ಜೈರಾಮ್ ರಮೇಶ್ ಸೇರಿದಂತೆ ವಿವಿಧ ಪಕ್ಷಗಳ ಪ್ರತಿನಿಧಿಗಳು, ಬಿಜೆಡಿ, ಎನ್ಸಿಪಿ ಮತ್ತು ಇತರ ಪಕ್ಷಗಳ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.
ಆದರೆ, ಸಭೆಯಲ್ಲಿ ಸದನದ ಕಲಾಪಕ್ಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.
Hon'ble Chairman Rajya Sabha, Shri Jagdeep Dhankhar convened an all-party meeting in his chamber today in an attempt to break deadlock in the Upper House. pic.twitter.com/3u4agPZmBU
— Vice-President of India (@VPIndia) July 28, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.