ಬೆಂಗಳೂರು: ಸಚಿವ ಕೃಷ್ಣಭೈರೇಗೌಡ ಅವರು ಇಂದು ವಿಕಾಸಸೌಧದಲ್ಲಿ ಸಿಂಗಾಪೂರ ಮೂಲದ ಹೂಡಿಕೆದಾರ ಕಂಪನಿಗಳ ಅಧಿಕಾರಿಗಳ ಜೊತೆಗೆ ಮಹತ್ವದ ಸಮಾಲೋಚನೆ ನಡೆಸಿದರು. ಅಲ್ಲದೇ, ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಟ್ರಾಫಿಕ್ ಸುಧಾರಣೆಗಾಗಿ ಟ್ರಾಫಿಕ್ ಮ್ಯಾನೇಜ್ಮೆಂಟ್ ಮೇಲೆ ಹೂಡಿಕೆ ಮಾಡುವಂತೆ ಪ್ರಸ್ತಾವ ಸಲ್ಲಿಸಿದರು.
ಸಿಂಗಾಪೂರ್ ಟ್ರಾಫಿಕ್ ನಿರ್ವಹಣೆಯಲ್ಲಿ ಮಾದರಿಯಾಗಿದ್ದು, ಬೆಂಗಳೂರಿನ ಟ್ರಾಫಿಕ್ ನಿರ್ವಹಣೆ ಮೇಲೆ ಹೂಡಿಕೆ ಮಾಡಬಹುದು. ಸರ್ಕಾರ ಹೂಡಿಕೆದಾರರಿಗೆ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಈ ವೇಳೆ ಸಚಿವರು ಸಿಂಗಾಪಪುರದ ಕಂಪನಿಗಳ ಅಧಿಕಾರಿಗಳಿಗೆ ಆಶ್ವಾಸನೆ ನೀಡಿದರು.
ಟ್ರಾಫಿಕ್ ನಿರ್ವಹಣೆ ಮಾತ್ರವಲ್ಲದೆ, ಸಾರ್ವಜನಿಕ ಸಾರಿಗೆ, ರಸ್ತೆ ನಿರ್ವಹಣೆ ವಿಚಾರದಲ್ಲೂ ಸಿಂಗಾಪೂರ ಮಾದರಿ ನಗರ. ಹೀಗಾಗಿ ನಮ್ಮ ಪ್ರಸ್ತಾವನೆಯನ್ನು ಹೂಡಿಕೆದಾರರು ಒಪ್ಪಿದರೆ ಶೀಘ್ರದಲ್ಲೇ ಒಂದು ನಿಯೋಗ ಸಿಂಗಾಪೂರಕ್ಕೆ ಭೇಟಿ ನೀಡಿ ಅಲ್ಲಿನ ಟ್ರಾಫಿಕ್ ನಿರ್ವಹಣೆ ಮತ್ತು ಸಾರ್ವಜನಿಕ ಸಾರಿಗೆಯಲ್ಲಿನ ಪ್ರಗತಿಯ ಬಗ್ಗೆ ಅಧ್ಯಯನ ನಡೆಸಲಿದೆ ಎಂದು ಸಚಿವರು ತಿಳಿಸಿದರು.
ಬೆಂಗಳೂರು ಸೇರಿದಂತೆ ರಾಜ್ಯದ ಕೆಲ ನಗರಗಳಲ್ಲಿ ಮಿತಿಮೀರಿದ ಟ್ರಾಫಿಕ್ ಸಮಸ್ಯೆ ಇದೆ. ಸರ್ಕಾರ ಹಲವು ಕ್ರಮ ತೆಗೆದುಕೊಂಡರೂ ಸಹ ಟ್ರಾಫಿಕ್ ನಿರ್ವಹಣೆ ಸವಾಲಿನ ಕೆಲಸವಾಗಿದೆ. ಹೀಗಾಗಿ ಸರ್ಕಾರದ ಪ್ರಸ್ತಾವನೆ ಮಹತ್ವ ಪಡೆದುಕೊಂಡಿದೆ.
ಸಭೆಯಲ್ಲಿ ಮಾತನಾಡಿದ ಸಿಂಗಾಪೂರ್ ಉದ್ಯಮಗಳ ಅಧಿಕಾರಿಗಳು, ಭಾರತದ ವಿವಿಧ ಕ್ಷೇತ್ರಗಳಲ್ಲಿ 70 ಮಿಲಿಯನ್ ಅಮೆರಿಕ ಡಾಲರ್ ಹೂಡಿಕೆ ಮಾಡುವ ಉದ್ದೇಶ ಇದೆ. ಈ ಪೈಕಿ ಕರ್ನಾಟಕದಲ್ಲಿ ಹೂಡಿಕೆ ಮಾಡಲು ನಾವು ಉತ್ಸುಕರಾಗಿದ್ದೇವೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.