ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿನಿಂದ ಜರ್ಜರಿತಗೊಂಡಿರುವ ಪಾಕಿಸ್ಥಾನದಲ್ಲಿ ಇದೀಗ ರಾಜಕೀಯ ಗದ್ದಲಗಳು ಆರಂಭವಾಗುತ್ತಿವೆ. ಪ್ರಧಾನಿ ಶೆಹಬಾಜ್ ಷರೀಫ್ ಶಿಫಾರಸಿನ ಮೇರೆಗೆ ಸಂಸತ್ತನ್ನು ಬುಧವಾರ ತಡರಾತ್ರಿ ವಿಸರ್ಜಿಸಲಾಗಿದೆ. ಇದೀಗ ಅಲ್ಲಿ ಸಾರ್ವತ್ರಿಕ ಚುನಾವಣೆಗೆ ವೇದಿಗೆ ಸಜ್ಜಾಗಿದೆ.
ಪಾಕಿಸ್ಥಾನ ಸಂಸತ್ತಿನ 5 ವರ್ಷಗಳ ಅವಧಿ ಪೂರ್ಣಗೊಳ್ಳಲು 3 ದಿನಗಳ ಮುಂಚಿತವಾಗಿ ಅದನ್ನು ವಿಸರ್ಜಿಸಲಾಗಿದೆ. ಆಗಸ್ಟ್ 12ಸಂಸತ್ತಿನ ಅವಧಿ ಮುಕ್ತಾಯಗೊಳ್ಳುವ ದಿನವಾಗಿತ್ತು. ಪಾಕಿಸ್ತಾನದ ಸಂವಿಧಾನದ ಪ್ರಕಾರ ಸರ್ಕಾರದ ಅವಧಿ ಪೂರೈಸಿದ 60 ದಿನಗಳಲ್ಲಿ ಚುನಾವಣೆ ನಡೆಯಬೇಕು. ಅವಧಿಗೂ ಮುನ್ನ ವಿಸರ್ಜನೆ ಮಾಡಿದರೆ 90 ದಿನಗಳ ಕಾಲಾವಕಾಶ ಇರಲಿದೆ. ಇದೀಗ ಸಂಸತ್ತನ್ನು ಅವಧಿ ಪೂರ್ಣಗೊಳ್ಳುವ ಮೊದಲೇ ವಿಸರ್ಜನೆ ಮಾಡಿರುವುದರಿಂದ ಹೊಸ ಚುನಾವಣೆ ನಡೆಸಲು 90 ದಿನಗಳ ಕಾಲಾವಕಾಶ ಸಿಗಲಿದೆ.
ಹಂಗಾಮಿ ಪ್ರಧಾನಿಯಾಗಿ ನಾಮನಿರ್ದೇಶನ ಮಾಡಲು ಎರಡೂ ಕಡೆಯಿಂದ ಶಿಫಾರಸು ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಗುರುವಾರ ವಿರೊಧ ಪಕ್ಷಗಳ ನಾಯಕರೊಂದಿಗೆ ಚರ್ಚೆ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.
ವಿಸರ್ಜನೆಯು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾಗವಹಿಸಲು ಸಾಧ್ಯವಾಗದ ಚುನಾವಣೆಗಳನ್ನು ಮೇಲ್ವಿಚಾರಣೆ ಮಾಡಲು ಉಸ್ತುವಾರಿ ಸರ್ಕಾರಕ್ಕೆ ದಾರಿ ಮಾಡಿಕೊಟ್ಟಿದೆ. ಏಪ್ರಿಲ್ 2022 ರಲ್ಲಿ ಅವರನ್ನು ಅಧಿಕಾರದಿಂದ ತೆಗೆದುಹಾಕಿದಾಗಿನಿಂದ ಅವರ ವಿರುದ್ಧ ದಾಖಲಾಗಿರುವ ಹಲವಾರು ಪ್ರಕರಣಗಳ ಪೈಕಿ ಒಂದರಲ್ಲಿ ಖಾನ್ ಅವರನ್ನು ಜೈಲಿಗೆ ಹಾಕಲಾಗಿದೆ.
ವರದಿಗಳ ಪ್ರಕಾರ, ರಾಜಕೀಯ ಅಸ್ಥಿರತೆ ಮತ್ತು ಹಣಕಾಸು ಕೊರತೆಯ ಕಾರಣ ಪಾಕಿಸ್ತಾನ ಸರ್ಕಾರವು ಚುನಾವಣೆಯನ್ನು ಮುಂದೂಡಲು ಯೋಚಿಸುತ್ತಿದೆ, ಅದಕ್ಕಾಗಿ ಅವಧಿಗಿಂತ ಮೊದಲು ಸಂಸತ್ತನ್ನು ವಿಸರ್ಜನೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.