ಬೆಂಗಳೂರು: ಕರ್ನಾಟಕದಲ್ಲಿ ಒಟ್ಟು 6395 ಆನೆಗಳು ಇವೆ ಎಂಬುದು ರಾಜ್ಯದ 32 ವಿಭಾಗಗಳಲ್ಲಿ ನಡೆದ ಆನೆ ಗಣತಿಯಿಂದ ತಿಳಿದುಬಂದಿದೆ. ಮುಖ್ಯವಾಗಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೆಚ್ಚು ಆನೆಗಳು ಇರುವುದು ಪತ್ತೆಯಾಗಿವೆ ಎಂದು ಗಣತಿಯ ವರದಿಗಳು ತಿಳಿಸಿವೆ.
ವಿಕಾಸಸೌಧದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಆನೆ ಗಣತಿ ವರದಿಯನ್ನು ಬಿಡುಗಡೆ ಮಾಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಈ ಮಾಹಿತಿಯನ್ನು ಬಹಿರಂಗಪಡಿಸಿದರು.
ಪ್ರೊ. ಆರ್. ಸುಕುಮಾರ್ ನೇತೃತ್ವದ ಭಾರತೀಯ ವಿಜ್ಞಾನ ಸಂಸ್ಥೆಯ ತಾಂತ್ರಿಕ ನೆರವಿನೊಂದಿಗೆ ಕರ್ನಾಟಕ ಅರಣ್ಯ ಇಲಾಖೆ ಆನೆಗಳ ಗಣತಿ ನಡೆಸಿದೆ. ರಾಜ್ಯದ 34 ವಿಭಾಗಗಳಿಂದ 3400 ಕ್ಕೂ ಹೆಚ್ಚು ಸಿಬ್ಬಂದಿ ಈ ಕಾರ್ಯದಲ್ಲಿ ಭಾಗಿಯಾಗಿದ್ದರು ಎಂದು ಅವರು ತಿಳಿಸಿದ್ದಾರೆ.
ಮೂರು ವಿಧಾನಗಳಲ್ಲಿ ಗಣತಿ ನಡೆದಿದೆ. 5.0 ಚದರ ಕಿ.ಮೀ ವ್ಯಾಪ್ತಿಯ ವಿವಿಧ ಮಾದರಿ ಬ್ಲಾಕ್ ಗಳಲ್ಲಿ ಆನೆಗಳ ನೇರ ಎಣಿಕೆ ನಡೆಸಲಾಗಿದೆ. ಜೊತೆಗೆ ಟ್ರಾಂಜೆಕ್ಟ್ ಸಮೀಕ್ಷೆ ಅಥವಾ ಲದ್ದಿ ಎಣಿಕೆ ವಿಧಾನದಲ್ಲಿ 2 ಕಿ.ಮೀ ಉದ್ಧದ ಟ್ರಾಂಜಾಕ್ಟ್ ರೇಖೆಗಳಲ್ಲಿ ಸಮೀಕ್ಷೆ ನಡೆಸಲಾಗಿದೆ. ಇನ್ನು ವಾಟರ್ ಹೋಲ್ ಎಣಿಕೆ ಮಾದರಿಯಲ್ಲಿ ನೇರವಾಗಿ ನೋಡಿ ಎಣಿಕೆ ಕಾರ್ಯ ಮಾಡಲಾಗಿದೆ.
ಗಣತಿಯಿಂದಾಗಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 1116, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ 831, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ 619, ಎಂಎಂ ಹಿಲ್ಸ್ನಲ್ಲಿ 706, ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ 445, ಬನ್ನೇರುಘಟ್ಟ ಉದ್ಯಾನವನದಲ್ಲಿ 127, ಕಾಲಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ 38 ಆನೆಗಳು ಇರುವುದು ಖಚಿತವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.