ಬೆಂಗಳೂರು: ದಿವಂಗತ ದೇವರಾಜು ಅರಸು ಅವರ ಜನ್ಮದಿನಾಚರಣೆಯ ಸ್ಮರಣಾರ್ಥ ಕಳೆದ ವರ್ಷ ರಾಜ್ಯ ಪ್ರಶಸ್ತಿಯೊಂದಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ನೀಡಲಾಗಿತ್ತು, ಅದನ್ನು ಈ ಬಾರಿಯೂ ಮುಂದುವರಿಸುವಂತೆ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕಳೆದ ವರ್ಷಗಳಲ್ಲಿ ಬಿಜೆಪಿ ಸರ್ಕಾರವು ದೇವರಾಜು ಅರಸು ಅವರ ಹೆಸರಿನಲ್ಲಿ ರಾಜ್ಯಮಟ್ಟದ ಪ್ರಶಸ್ತಿಯೊಂದಿಗೆ ಅರಸು ಅವರ ಆದರ್ಶಗಳಿಗೆ ಪೂರಕವಾಗಿ ಕೆಲಸ ಮಾಡಿದ ಗಣ್ಯರಿಗೆ ಜಿಲ್ಲಾಮಟ್ಟದ ದೇವರಾಜ ಅರಸು ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಅರಸು ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಅವರ ನೆನಪಿನ ಜಿಲ್ಲೆ ಮತ್ತು ರಾಜ್ಯಗಳಲ್ಲಿ ಮೂರು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ದೇವರಾಜು ಅರಸು ಅವರ ಕುರಿತು ಸಾಹಿತ್ಯ ಕಲೆ ಜನಪದ ಮತ್ತು ವಿವಿಧ ಜಾತಿಗಳ ಕುಲಕಸುಗಳ ವಸ್ತು ಪ್ರದರ್ಶನ ಮತ್ತು ಮಾರಾಟವನ್ನು ಏರ್ಪ ಡಿಸಲಾಗಿದೆ. ಈ ಬಾರಿಯೂ ಅದನ್ನು ಮುಂದುವರಿಸುವಂತೆ ಕೋಟ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.