ಮಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸುತ್ತದೆ. ಇದಕ್ಕಾಗಿ ಆ. 27ರಂದು ಬಿಜೆಪಿ ಬೃಹತ್ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಇಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಎಸ್ಡಿಎಂ ವಿದ್ಯಾರ್ಥಿನಿ ಸೌಜನ್ಯ ಪ್ರಕರಣ ಪೊಲೀಸ್ ತನಿಖೆ ಆಗಿದೆ. ಸಿಐಡಿ ಬಳಿಕ ಹೋರಾಟ ನಡೆದು ಸಿಬಿಐ ತನಿಖೆ ಕೂಡ ಆಗಿದೆ. ಕೊನೆಗೆ ಸಿಬಿಐ ಬಂಧಿತ ವ್ಯಕ್ತಿ ಆರೋಪಿ ಅಲ್ಲ ಅಂತ ಹೇಳಿದೆ. ಆವತ್ತು ಕೂಡ ಬಿಜೆಪಿ ಈ ವಿಚಾರದಲ್ಲಿ ಹೋರಾಟ ಮಾಡಿತ್ತು. ಇದೀಗ ಮತ್ತೆ ಬಿಜೆಪಿ ಇಡೀ ಪ್ರಕರಣದ ಮರು ತನಿಖೆಗೆ ಆಗ್ರಹಿಸುತ್ತದೆ ಎಂದಿದ್ದಾರೆ.
ಹಂತಕರ ಪತ್ತೆ ಮೂಲಕ ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕು. ಹೀಗಾಗಿ ಬಿಜೆಪಿ ಪ್ರಕರಣದ ಮರು ತನಿಖೆಗೆ ಸಿಎಂಗೆ ಒತ್ತಾಯ ಮಾಡಲಿದೆ ಎಂದರು.
ಆ.27 ರಂದು ದ.ಕ ಮತ್ತು ಉಡುಪಿ ಜಿಲ್ಲೆಯ ಕಾರ್ಯಕರ್ತರನ್ನು ಸೇರಿಸಿ ಬೃಹತ್ ಹೋರಾಟ ನಡೆಯಲಿದೆ, ಬಳಿಕ ಸಿಎಂ ಮತ್ತು ರಾಜ್ಯಪಾಲರಿಗೆ ಮನವಿ ಕೊಡಲಿದ್ದೇವೆ. ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗ ಬೃಹತ್ ಹೋರಾಟ ನಡೆಯಲಿದೆ. ಎರಡೂ ಜಿಲ್ಲೆಗಳ ಶಾಸಕರು, ನಾಯಕರು ಭಾಗಿಯಾಗಲಿದ್ದಾರೆ ಎಂದರು.
ಪ್ರತಿಭಟನೆಯ ಮರು ದಿನ ಶಾಸಕರ ನಿಯೋಗ ಸಿಎಂ ಭೇಟಿಯಾಗಲಿದೆ ಎಂದರು.
ಸೌಜನ್ಯ ಕೇಸ್ ನಲ್ಲಿ ಸಿಬಿಐಗೆ ಹೋದರೂ ಆರೋಪಿಗಳು ಯಾರು ಅನ್ನೋದು ಆಗಿಲ್ಲ. ಇದರಲ್ಲಿ ಯಾರನ್ನೂ ಟಾರ್ಗೆಟ್ ಮಾಡುವ ವಿಷಯ ಇಲ್ಲ. ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಅನ್ನೋದು ನಮ್ಮ ಉದ್ದೇಶ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.