ಮುಂಬೈ: ಆಗಸ್ಟ್ 14ರಂದು ಪಾಕಿಸ್ತಾನ ದಿನವನ್ನು ಆಚರಿಸಿದ ಇಬ್ಬರನ್ನು ಪುಣೆಯಲ್ಲಿ ಬಂಧಿಸಲಾಗಿದೆ. ಪುಣೆಯ ಕೊಂಡ್ವಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಅಕ್ಬರ್ ನದಾಫ್ ಮತ್ತು ತೌಕೀರ್ ಬಂಧಿತ ಆರೋಪಿಗಳು.
ಸಾರ್ವಜನಿಕ ಪ್ರದರ್ಶನದಲ್ಲಿ, ಅಕ್ಬರ್ ನದಾಫ್ ಮತ್ತು ತೌಕೀರ್ ಇಬ್ಬರೂ ಪಾಕಿಸ್ತಾನ ದಿನವನ್ನು ಆಚರಿಸಿದರು ಮತ್ತು ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದರು ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಪಾಕಿಸ್ತಾನದ ಪರ ಘೋಷಣೆಗಳನ್ನು ಕೇಳಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಲಂ 153 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಮಾಜದಲ್ಲಿ ಕೋಮುವಾದ ಮತ್ತು ಧಾರ್ಮಿಕ ವೈಷಮ್ಯ ಸೃಷ್ಟಿಸುವುದು ಆರೋಪಿಯ ಉದ್ದೇಶವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಾದ ಅಕ್ಬರ್ ನದಾಫ್ ಮತ್ತು ತೌಕೀರ್ ಖಾಸಗಿ ಸಂಸ್ಥೆಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.