ಮಂಡ್ಯ: ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಮೂಲಕ ಕಾವೇರಿ ತಟದ ರೈತರಿಗೆ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತರುವುದನ್ನು ನಡೆ ವಿರೋಧಿಸಿ ರಾಜ್ಯ ಬಿಜೆಪಿ ಮಂಡ್ಯದ ಸಂಜಯ್ ವೃತ್ತದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ನಡೆಸುತ್ತಿದೆ.
ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಅವರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಖಂಡನೀಯ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಯಾರನ್ನೂ ಕೇಳದೆ ಈಗಾಗಲೇ 8 ಟಿಎಂಸಿ ಅಡಿ ನೀರು ಹರಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಇನ್ನೊಂದೆಡೆ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಕೂಡ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದು, ತಮಿಳುನಾಡಿಗೆ ನೀರು ನೀಡದಂತೆ ಆಗ್ರಹಿಸಿದೆ.
#WATCH | BJP holds protest in Karnataka's Mandya demanding not to further release water from the Cauvery river to Tamil Nadu pic.twitter.com/C8xqC2Ox2b
— ANI (@ANI) August 21, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.