ಬೆಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆ ಮಾಡುವಂತೆ ಆದೇಶ ನೀಡಲು ರಾಜ್ಯಪಾಲರನ್ನು ಬಿಜೆಪಿ ನಿಯೋಗ ಮನವಿ ಮಾಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರ ನೇತೃತ್ವದ ನಿಯೋಗ ಇಂದು ಈ ಕುರಿತು ಮನವಿ ಸಲ್ಲಿಸಿತು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರು ಈ ನಿಯೋಗದಲ್ಲಿ ಇದ್ದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್, ರಾಜ್ಯದ ಮಾಜಿ ಸಚಿವ ವಿ. ಸುನೀಲ್ ಕುಮಾರ್, ಶಾಸಕರಾದ ಕು. ಭಾಗೀರಥಿ ಮುರಳ್ಯ, ವೇದವ್ಯಾಸ್ ಕಾಮತ್, ಡಾ|| ವೈ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಗುರ್ಮೆ ಸುರೇಶ್ ಶೆಟ್ಟಿ ಮತ್ತಿತರರು ನಿಯೋಗದಲ್ಲಿ ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.