ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು.
ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಪಕ್ಷವನ್ನು ನಿರಂತರವಾಗಿ ಸಂಘಟನೆ ಮಾಡಬೇಕು. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಶ್ರಮಿಸಬೇಕು. 100 ದಿನಗಳಲ್ಲಿ ಸಿದ್ದರಾಮಯ್ಯನವರ ಸರಕಾರವು ಜನಪ್ರಿಯತೆ ಕಳಕೊಂಡಿದೆ. ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಸಿದ್ದರಾಮಯ್ಯನವರ ಸರಕಾರದ ಜನವಿರೋಧಿ ನೀತಿಯನ್ನು ಜನರಿಗೆ ತಿಳಿಸಬೇಕು. ಇದೇ 18ರಿಂದ ಕುರುಡುಮಲೆಯಿಂದ ಬಿಜೆಪಿಯ ರಾಜ್ಯಾದ್ಯಂತ ರಾಜಕೀಯ ಪ್ರವಾಸ ಆರಂಭವಾಗಲಿದೆ. ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ತಿಳಿಸಿದ್ದಾರೆ.
ಎಸ್ಸಿ, ಎಸ್ಟಿ ಸಮುದಾಯದ ಅನುದಾನವನ್ನು ದುರುಪಯೋಗ ಮಾಡಿಕೊಂಡು ಈ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಭೀಕರ ಬರಗಾಲ ಇದ್ದರೂ ಅದರ ಕಡೆಗೆ ಗಮನ ನೀಡುತ್ತಿಲ್ಲ ಎಂದು ಆಕ್ಷೇಪಿಸಿದರು. ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹಿಸಿದರೆಂದು ತಿಳಿಸಿದ್ದಾರೆ.
ರಾಹುಲ್ ಗಾಂಧಿಯವರು ವಿದೇಶಿ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿ ಮಾತನಾಡಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾಗಿ ವಿವರಿಸಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಮಾತನಾಡಿ, ಪಕ್ಷ ಸಂಘಟನೆಗೆ ಒತ್ತು ಕೊಡುವಂತೆ ಸಲಹೆ ನೀಡಿದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಬರಗಾಲ, ಆಡಳಿತದಲ್ಲಿ ವೈಫಲ್ಯ ಸೇರಿದಂತೆ ಕಾಂಗ್ರೆಸ್ ಸರಕಾರದ ಅಸಮರ್ಪಕ ಆಡಳಿತ ವೈಖರಿ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ತಿಳಿಸಿದ್ದಾಗಿ ಎಂ.ಜಿ. ಮಹೇಶ್ ಅವರು ವಿವರ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.