ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.
“ಬಾರಾಮುಲ್ಲಾ ಜಿಲ್ಲೆಯ ಉರಿ, ಹತ್ಲಂಗಾದ ಫಾರ್ವರ್ಡ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಸೇನೆ, ಬಾರಾಮುಲ್ಲಾ ಪೊಲೀಸರ ನಡುವೆ ಎನ್ಕೌಂಟರ್ ಪ್ರಾರಂಭವಾಯಿತು” ಎಂದು ಕಾಶ್ಮೀರ ವಲಯ ಪೊಲೀಸರು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ನಡುವೆ, ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ನಲ್ಲಿ ನಡೆಯುತ್ತಿರುವ ಎನ್ಕೌಂಟರ್ ಶನಿವಾರ 4 ನೇ ದಿನವನ್ನು ಪ್ರವೇಶಿಸಿದ್ದು, ದೊಡ್ಡ ಸ್ಫೋಟಗಳು ಕೇಳಿಬಂದಿವೆ. ಭಯೋತ್ಪಾದಕರ ಪತ್ತೆಗೆ ಡ್ರೋನ್ ಕಣ್ಗಾವಲು ಕೂಡ ಬಳಸಲಾಗುತ್ತಿದೆ.
ಅನಂತ್ನಾಗ್ ಎನ್ಕೌಂಟರ್ನಲ್ಲಿ ನಾಲ್ವರು ಭದ್ರತಾ ಪಡೆಗಳ ಸಿಬ್ಬಂದಿಗಳು ಹತ್ಯೆಯಾಗಿದ್ದಾರೆ.
#BaramullaEncounterUpdate: 01 terrorist killed. Search going on. Further details shall follow. https://t.co/22dP32S8dT
— Kashmir Zone Police (@KashmirPolice) September 16, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.