ಬೆಂಗಳೂರು: ಕಾವೇರಿ ವಿವಾದ ತಾರಕಕ್ಕೇರುತ್ತಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ ಆರು ಗಂಟೆಯಿಂದಲೂ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ. ಬಸ್ಗಳ ಪ್ರಯಾಣ ಕೂಡ ವಿರಳವಾಗಿದೆ
ಅಂಗಡಿಗಳಂತೆ ಶಾಪಿಂಗ್ ಮಾಲ್ಗಳನ್ನೂ ಕೂಡ ಮುಚ್ಚಲಾಗಿದೆ, ಎಲ್ಲಾ ಪ್ರದೇಶಗಳಲ್ಲೂ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜನನಿಬಿಡ ಪ್ರದೇಶಗಳು ಇಂದು ಖಾಲಿಯಾಗಿ ಬಿಕೋ ಎನ್ನುತ್ತಿವೆ. ಅನೇಕರು ಸ್ವಯಂಪ್ರೇರಿತರಾಗಿ ಬಂದ್ಗೆ ಬೆಂಬಲ ನೀಡಿರುವುದರಿಂದ ಬಂದ್ ಯಶಸ್ಸಿಯಾಗಿದೆ.
ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ಗಳ ಸಂಚಾರವಿದೆ. ಆದರೆ ಪ್ರಯಾಣಿಕರಿಲ್ಲದೆ ಬಣಗುಡುತ್ತಿವೆ. ಖಾಸಗಿ ಬಸ್ಗಳು ಬಂದ್ಗೆ ಬೆಂಬಲ ನೀಡಿವೆ. ಜನದಟ್ಟಣೆ ಪ್ರದೇಶಗಳಾದ ಮೆಜೆಸ್ಟಿಕ್, ಕೆ ಆರ್ ಮಾರ್ಕೆಟ್ ಮತ್ತಿತರ ಕಡೆಗಳಲ್ಲಿ ಪ್ರಯಾಣಿಕರ ಸಂಖ್ಯೆ ಭಾರೀ ಕಡಿಮೆಯಿದೆ. ಆಟೋ ಚಾಲಕರು ಕೂಡ ಬಂದ್ಗೆ ಬೆಂಬಲ ನೀಡಿರುವ ಕಾರಣ ಆಟೋಗಳ ಓಡಾಟ ಸಂಪೂರ್ಣ ಬಂದ್ ಆಗಿದೆ.
ಬಂದ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳನ್ನು ಕೂಡ ಬಂದ್ ಮಾಡಲಾಗಿದೆ.
#WATCH | Karnataka: Bengaluru Bandh has been called by various organizations regarding the Cauvery water issue. According to BMTC, all routes of Bengaluru Metropolitan Transport Corporation will be operational as usual.
(Visuals from Majestic BMTC Bus stop, Bengaluru) pic.twitter.com/fSZSeLyKMh
— ANI (@ANI) September 26, 2023
#WATCH | Karnataka: Less number of passengers seen at Majestic Bus Station, Bengaluru because of the Bandh called by various organizations regarding the Cauvery water issue. pic.twitter.com/2LsqxAAHO9
— ANI (@ANI) September 26, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.