ಬೆಂಗಳೂರು: ನಾಳೆ ಕರ್ನಾಟಕ ಬಂದ್ಗೆ ವಿವಿಧ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗುತ್ತಿದೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
144 ಸೆಕ್ಷನ್ ಜಾರಿ ವೇಳೆ ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ, ಗುಂಪು ಸೇರುವಂತೆ ಇಲ್ಲ. ಬಂದ್ಗಳನ್ನು ಕರೆಯುವುದು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಬಂದ್ ವೇಳೆ ಆಸ್ತಿ ಪಾಸ್ತಿ ನಾಶ ಮತ್ತು ಸಾವು ನೋವಿಗೆ ಸಂಘಟಕರೇ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ವಾಹನಗಳನ್ನು ತಡೆಯುವುದು, ಡ್ಯಾಮೇಜ್ ಮಾಡುವುದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವುದು ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರು ನಗರದಲ್ಲಿ ವ್ಯಾಪಕ ರಕ್ಷಣಾ ಕ್ರಮ ಜರುಗಿಸಲಾಗುತ್ತದೆ. ಪ್ರತಿಭಟನೆ, ಮೆರವಣಿಗೆಗೆ ಯಾವುದೇ ಅವಕಾಶವಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.