ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಕೋಮು ಸಂಘರ್ಷಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಾಗ್ದಾಳಿ ನಡೆಸಿದ್ದು, ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಿದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ, ಇದಕ್ಕೆ ತುಷ್ಟೀಕರಣ ನೀತಿಯೇ ಕಾರಣ ಎಂದಿದ್ದಾರೆ.
ಮಾಜಿ ಸಚಿವ ಡಿ. ಸಿಎನ್ ಅಶ್ವಥನಾರಾಯಣ್ ಅವರು ಕೂಡ ಸರ್ಕಾರದ ಕ್ರಮವನ್ನು ಖಂಡಿಸಿದ್ದು, ರಾಜ್ಯ ಸರ್ಕಾರ ತುಷ್ಟೀಕರಣ ನೀತಿ ಅನುಸರಿಸುತ್ತಿದೆ. ಅಶಾಂತಿ ಇರಬೇಕೆಂಬ ಸರ್ಕಾರದ ಮನಸ್ಥಿತಿ ಶಿವಮೊಗ್ಗ ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಕಾಣುತ್ತಿದೆ ಎಂದಿದ್ದಾರೆ.
“ನಮ್ಮ ಸಂಸ್ಕೃತಿ, ನಮ್ಮ ಧರ್ಮ ನಿರ್ನಾಮ ಮಾಡುವ ವ್ಯಕ್ತಿಗಳನ್ನು ಮೆರೆಸುತ್ತಿದ್ದಾರೆ. ಎಸ್ಪಿ ಅವರ ಮೇಲೆ ಕಲ್ಲುತೂರಾಟ ಮಾಡಿ ಹಲ್ಲೆ ನಡೆಸಲಾಗಿದೆ ಆದರೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರ ಬಾಯಿ ಮುಚ್ಚಿ ಕುಳಿತಿದೆ. ಅಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಆಗುತ್ತಿಲ್ಲ, ಗಲಭೆ ಮಾಡಿದವರು ಆಸ್ತಿಪಾಸ್ತಿ ಜಪ್ತಿ ಮಾಡಬೇಕು, ಗುಂಡ ಕಾಯ್ದೆ ವಿಧಿಸಬೇಕು” ಎಂದು ಒತ್ತಾಯಿಸಿದ್ದಾರೆ.
ನಿನ್ನೆ ಕತ್ತಿ ಗುರಾಣಿ ಹಿಡಿದು ಮೆರವಣಿಗೆ ಮಾಡಲು ಅವಕಾಶ ಕೊಟ್ಟವರು ಯಾರು? ಎಂದು ಪ್ರಶ್ನಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.