ಟೆಲ್ ಅವಿವ್: ಹಮಾಸ್ ದಾಳಿಯ ನಂತರ ಅಮೆರಿಕ ಅಧ್ಯಕ್ಷ ಜೋ ಬಿಡನ್ ಇಸ್ರೇಲ್ಗೆ ತಮ್ಮ ಬೆಂಬಲವನ್ನು ದೃಢಪಡಿಸುತ್ತಲೇ ಬಂದಿದ್ದಾರೆ. ಇದೀಗ ತಮ್ಮ ಬೆಂಬಲದ ಭಾಗವಾಗಿ ಅವರು ಗುರುವಾರ ಇಸ್ರೇಲ್ಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಘೋಷಿಸಿದ್ದಾರೆ.
ಇನ್ನೊಂದೆಡೆ ಗಾಜಾಗೆ ನೆರವು ನೀಡುವ ಯೋಜನೆಯನ್ನು ಅಭಿವೃದ್ಧಿಪಡಿಸಲು ಇಸ್ರೇಲ್ ಮತ್ತು ವಾಷಿಂಗ್ಟನ್ ಒಪ್ಪಿಕೊಂಡಿವೆ ಎಂದು ಬ್ಲಿಂಕೆನ್ ಹೇಳಿದ್ದಾರೆ.
ಅಕ್ಟೋಬರ್ 7 ರಂದು ಹಮಾಸ್ ದಾಳಿಯ ನಂತರ ಯುಎಸ್ ರಾಜತಾಂತ್ರಿಕರ ಎರಡನೇ ಭೇಟಿಯ ಕುರಿತು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ರಕ್ಷಣಾ ಸಚಿವಾಲಯದಲ್ಲಿ ಸುಮಾರು ಎಂಟು ಗಂಟೆಗಳ ಕಾಲ ಮಾತಕತೆ ನಡೆಸಿದ ನಂತರ ಬ್ಲಿಂಕನ್ ಮಾತನಾಡಿದರು.
“ಅಧ್ಯಕ್ಷರು ಇಸ್ರೇಲ್ನೊಂದಿಗೆ ಯುನೈಟೆಡ್ ಸ್ಟೇಟ್ಸ್ ಐಕಮತ್ಯವನ್ನು ಮತ್ತು ಅದರ ಭದ್ರತೆಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಲಿದ್ದಾರೆ” ಎಂದು ಬ್ಲಿಂಕೆನ್ ಮಂಗಳವಾರ ಟೆಲ್ ಅವಿವ್ನಲ್ಲಿ ಹೇಳಿದ್ದಾರೆ.
“ಹಮಾಸ್ ಮತ್ತು ಇತರ ಭಯೋತ್ಪಾದಕರಿಂದ ತನ್ನ ಜನರನ್ನು ರಕ್ಷಿಸಲು ಮತ್ತು ಭವಿಷ್ಯದ ದಾಳಿಯನ್ನು ತಡೆಯಲು ಇಸ್ರೇಲ್ ಹಕ್ಕು ಮತ್ತು ಕರ್ತವ್ಯವನ್ನು ಹೊಂದಿದೆ” ಎಂದು ಬ್ಲಿಂಕನ್ ಹೇಳಿದರು.
On Wednesday, I'll travel to Israel to stand in solidarity in the face of Hamas's brutal terrorist attack.
I'll then travel to Jordan to address dire humanitarian needs, meet with leaders, and make clear that Hamas does not stand for Palestinians' right to self-determination.
— President Biden (@POTUS) October 17, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.