ಇಸ್ಲಾಮಾಬಾದ್: ಭಾರತದ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದ ಮತ್ತೊಬ್ಬ ಭಯೋತ್ಪಾದಕ ಪಾಕಿಸ್ಥಾನದಲ್ಲಿ ಹತನಾಗಿದ್ದಾನೆ. ಭಾರತ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಉಗ್ರನನ್ನು ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ.
ಪಾಕಿಸ್ತಾನದ ಉತ್ತರ ವಜೀರಿಸ್ತಾನ್ನಲ್ಲಿ ಭಯೋತ್ಪಾದಕ ದಾವೂದ್ ಮಲಿಕ್ನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ದಾವೂದ್ ಮಲಿಕ್, ಲಷ್ಕರ್-ಎ-ಜಬ್ಬಾರ್ ಸಂಸ್ಥಾಪಕ ಮತ್ತು ಭಾರತದ ಮೋಸ್ಟ್ ವಾಂಟೆಡ್ ಉಗ್ರರಲ್ಲಿ ಒಬ್ಬನಾದ ಮೌಲಾನಾ ಮಸೂದ್ ಅಜರ್ನ ನಿಕಟ ಸಹಾಯಕ. ದಾವೂದ್ ಮಲಿಕ್ ಖಾಸಗಿ ಕ್ಲಿನಿಕ್ನಲ್ಲಿದ್ದಾಗ ಆತನ ಮೇಲೆ ದಾಳಿ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಆತನನ್ನು ಹೊಂಚು ಹಾಕಿ ಗುಂಡಿಟ್ಟು ಕೊಂದು ಸ್ಥಳದಿಂದ ಪರಾರಿಯಾಗಿದ್ದಾರೆ.
ಇತ್ತೀಚಿಗಷ್ಟೇ ಮುಂಬಯಿ ದಾಳಿಯಲ್ಲಿ ಪಾತ್ರ ವಹಿಸಿದ್ದ ಉಗ್ರನನ್ನು ಪಾಕಿಸ್ಥಾನದಲ್ಲಿ ಅಪರಿಚಿತರು ಗುಂಡಿಟ್ಟು ಹತ್ಯೆ ಮಾಡಿದ್ದರು. ಇದೀಗ ಮತ್ತೊಬ್ಬನ ಕೊಲೆಯಾಗಿದ್ದು, ಈ ಘಟನೆಯು ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳ ನಡುವೆ ಸಂಘರ್ಷ ಏರ್ಪಟ್ಟಿದೆಯೇ ಎಂಬ ಅನುಮಾನಗಳನ್ನು ಹುಟ್ಟುಹಾಕಿದೆ.
Pakistan- Founder of Lashkar-e-Jabbar, close aid of India's most wanted Maulana Masood Azhar- Dawood Malik, has been killed by 'Unknown Men' in north waziristan. pic.twitter.com/y5HYedhzxi
— Megh Updates 🚨™ (@MeghUpdates) October 21, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.