ಬೆಂಗಳೂರು: ಮನುಷ್ಯನ ಸಾರ್ಥಕ ಬದುಕಿಗೆ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಮಹಾಕಾವ್ಯವು ಮಾರ್ಗದರ್ಶನ ನೀಡುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ|| ಸಿ.ಎನ್.ಅಶ್ವತ್ಥ್ನಾರಾಯಣ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮಾಯಣವು ಎಂದೆಂದೂ ಪ್ರಸ್ತುತ ಎಂದರು. ಪವಿತ್ರ, ಅಮರ ಮಹಾಕಾವ್ಯವನ್ನು ಮಹರ್ಷಿ ವಾಲ್ಮೀಕಿ ಅವರು ಜನತೆಗೆ ನೀಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. ಮಹರ್ಷಿ ವಾಲ್ಮೀಕಿಯವರ ಸ್ಮರಣೆ, ಅವರಿಗೆ ಗೌರವ ನೀಡುವ ಕಾರ್ಯ ಪ್ರತಿನಿತ್ಯ, ಪ್ರತಿಕ್ಷಣವೂ ನಡೆಯಲಿ ಎಂದು ಆಶಿಸಿದರು.
ಹಿಂದಿನ ಬಿಜೆಪಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಸರಕಾರವೇ ಆಚರಿಸಲು ಮತ್ತು ರಜಾದಿನವಾಗಿ ಪ್ರಕಟಿಸಿದ್ದಾಗಿ ಅವರು ನೆನಪಿಸಿದರು. ಯಡಿಯೂರಪ್ಪ ಅವರು ಮತ್ತು ಅಂದಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಗೋವಿಂದ ಕಾರಜೋಳ ಅವರ ಪ್ರಯತ್ನದಿಂದ ಈ ಗೌರವ ಸಲ್ಲುತ್ತಿದೆ ಎಂದು ವಿವರಿಸಿದರು.
ರಾಮಾಯಣವನ್ನು ಪ್ರಶ್ನಿಸುವ, ನಂಬಿಕೆಗಳಿಗೆ ಅನುಮಾನ ಬರುವಂತೆ ಕೇಳುವ ಕಾರ್ಯ ನಡೆದಿದೆ. ಶಾಲೆಗಳಲ್ಲಿ ರಾಮಾಯಣ, ಭಗವದ್ಗೀತೆ, ಮಹಾಭಾರತದ ಕಲಿಕೆಗೆ ಅವಕಾಶವಿಲ್ಲ. ಈ ಮಹಾಕಾವ್ಯಗಳು ನಮ್ಮ ಸಂಸ್ಕøತಿ, ದೇಶದ ನಮ್ಮತನಕ್ಕೆ ಪೂರಕ. ಇವುಗಳ ಸಂಪೂರ್ಣ ತಿಳಿವಳಿಕೆ ಸಿಗಬೇಕು; ಇವುಗಳ ಮನವರಿಕೆ ಆಗಲಿ ಎಂದು ತಿಳಿಸಿದರು.
ನಮ್ಮ ಸಂಸ್ಕøತಿಯನ್ನು ಕಡೆಗಣಿಸುವ ಕಾರ್ಯ ನಡೆದಿದೆ ಎಂದು ಬೇಸರ ಸೂಚಿಸಿದ ಅವರು, ರಾಮಾಯಣದ ಅಂಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳೋಣ. ಧರ್ಮವನ್ನು ಅರಿಯಲು ಪ್ರಯತ್ನ ಮಾಡೋಣ ಎಂದು ತಿಳಿಸಿದರು. ನೆಚ್ಚಿನ ಪ್ರಧಾನಿ ಮೋದಿಜಿಯವರು ಮತ್ತು ಬಿಜೆಪಿಯು ಎಲ್ಲ ವರ್ಗಗಳ ಸಂಸ್ಕøತಿಯನ್ನು ತಾರತಮ್ಯವಿಲ್ಲದೆ ಎತ್ತಿಹಿಡಿಯುವ ಕಾರ್ಯ ಮಾಡುತ್ತಿವೆ ಎಂದು ವಿವರಿಸಿದರು.
ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಎಸ್ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಓಲೆಕಾರ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ನಂಜುಂಡೇಗೌಡ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಗುರುಲಿಂಗನ ಗೌಡ, ರಾಜ್ಯ ಕಟ್ಟಡ ಸಮಿತಿ ಸದಸ್ಯ ಡಾ. ಎಂ ನಾಗರಾಜ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ ನಾರಾಯಣಗೌಡ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಕಾರ್ಯಾಲಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.