ಭೋಪಾಲ್: ಮಧ್ಯಪ್ರದೇಶದಲ್ಲಿ ಒಂದೇ ಹಂತದ ವಿಧಾನಸಭೆ ಚುನಾವಣೆ ಹಾಗೂ ಛತ್ತೀಸ್ಗಢದಲ್ಲಿ ಎರಡನೇ ಮತ್ತು ಅಂತಿಮ ಹಂತದ ಚುನಾವಣೆಗೆ ಮತದಾನ ಆರಂಭವಾಗಿದೆ.
ಮಧ್ಯಪ್ರದೇಶದಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಆದರೆ ಬಾಲಾಘಾಟ್ ಜಿಲ್ಲೆಯ ಬೈಹಾರ್, ಲಾಂಜಿ ಮತ್ತು ಪಾರ್ಶ್ವರ ವಿಧಾನಸಭಾ ಕ್ಷೇತ್ರಗಳು ಮತ್ತು ಮಂಡ್ಲಾ ಮತ್ತು ದಿಂಡೋರಿ ಜಿಲ್ಲೆಗಳ ಕೆಲವು ಬೂತ್ಗಳಲ್ಲಿ ಮತದಾನವು ಮಧ್ಯಾಹ್ನ 3 ಗಂಟೆಗೆ ಮುಕ್ತಾಯಗೊಳ್ಳಲಿದೆ.
ಮಧ್ಯಪ್ರದೇಶದ ಎಲ್ಲಾ 230 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆಗೆ 64 ಸಾವಿರಕ್ಕೂ ಹೆಚ್ಚು ಬೂತ್ಗಳಲ್ಲಿ ಮತದಾನ ನಡೆಯುತ್ತಿದೆ. ಈ ಪೈಕಿ 5,160 ಪಿಂಕ್ ಬೂತ್ಗಳನ್ನು ಮಹಿಳಾ ಸಿಬ್ಬಂದಿ ನಿರ್ವಹಿಸಿದರೆ, 183 ಬೂತ್ಗಳನ್ನು ದಿವ್ಯಾಂಗರು ಮತ್ತು 371 ಬೂತ್ಗಳನ್ನು ಯುವಕರು ನಿರ್ವಹಿಸುತ್ತಿದ್ದಾರೆ. ಸುಮಾರು 5 ಕೋಟಿ 60 ಲಕ್ಷ ಮತದಾರರು 252 ಮಹಿಳೆಯರು ಸೇರಿದಂತೆ 2,533 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳೆಂದರೆ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಪಟೇಲ್, ಫಗ್ಗನ್ ಸಿಂಗ್ ಕುಲಸ್ತೆ, ಬಿಜೆಪಿಯಿಂದ ಕೈಲಾಶ್ ವಿಜಯವರ್ಗಿಯ, ಕಾಂಗ್ರೆಸ್ನಿಂದ ಮಾಜಿ ಮುಖ್ಯಮಂತ್ರಿ ಕಮಲನಾಥ್.
ಮತದಾನದ ವೇಳೆ ಭದ್ರತೆಗಾಗಿ 700 ಕಂಪನಿ ಕೇಂದ್ರೀಯ ಪಡೆಗಳು ಮತ್ತು ರಾಜ್ಯದ 2 ಲಕ್ಷ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.