ಬೆಂಗಳೂರು: ಸರ್ಕಾರ ರಚನೆಯಾಗಿ ಆರು ತಿಂಗಳ ಬಳಿಕ ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿ ಮಾಜಿ ಸಚಿವ ಮತ್ತು ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್ ಅಶೋಕ್ ಅವರನ್ನು ಹೈಕಮಾಂಡ್ ನೇಮಕ ಮಾಡಿದೆ.
ವಿರೋಧ ಪಕ್ಷದ ನಾಯಕನೆಂದು ಘೋಷಣೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ ಅಶೋಕ್, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ನಾನು ಜೋಡೆತ್ತುಗಳಾಗಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಎರಡು ಗುಂಪುಗಳಾಗಿವೆ. ಅಧಿಕಾರಕ್ಕೆ ಬಂದ ತಕ್ಷಣವೇ ವರ್ಗಾವಣೆ ದಂಧೆ ಶುರು ಮಾಡಿದೆ. ಕಾಂಗ್ರೆಸ್ನವರು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದರು. ಆದರೆ ಗ್ಯಾರಂಟಿ ಯೋಜನೆ ಶೇಕಡಾ 50ರಷ್ಟು ಜನರಿಗೂ ತಲುಪಿಲ್ಲ ಎಂದು ಟೀಕಿಸಿದರು.ನಾವು ಅಧಿಕಾರದಲ್ಲಿದ್ದಾಗ ರೈತರ ಪರ ನಿಂತಿದ್ದೆವು. ಆದರೆ ಈಗ ಕಾಂಗ್ರೆಸ್ ಸರ್ಕಾರ ರೈತರ ಯೋಜನೆಗಳನ್ನೇ ನಿಲ್ಲಿಸಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ರೈತರಿಗೆ ಮೋಸ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ನಮ್ಮ ಶಾಸಕರ ಅನುದಾನ ಕಡಿತಗೊಳಿಸಿದ್ದಾರೆ.
ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ನೇಮಕ ಮಾಡಿರುವ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ನಾಯಕರಾದ ಪ್ರಧಾನಮಂತ್ರಿಗಳಾದ ಶ್ರೀ @narendramodi ಜೀರವರಿಗೂ, ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಜೀರವರಿಗೂ, ಕೇಂದ್ರ ಗೃಹ ಸಚಿವರಾದ ಶ್ರೀ @AmitShah ಜೀರವರಿಗೂ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ @BSYBJP ಜೀರವರಿಗೂ, ರಾಷ್ಟ್ರೀಯ…
— R. Ashoka (ಆರ್. ಅಶೋಕ) (@RAshokaBJP) November 17, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.