
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ವಾಯುಪಡೆಯಿಂದ ಶತಕೋಟಿ ಮೊತ್ತದ ಆರ್ಡರ್ ಪಡೆಯುವ ನಿರೀಕ್ಷೆಯಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಕಂಪನಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ.
ಬೆಳಗ್ಗೆ 9:15ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಮೋದಿಯವರು, ಈ ವೇಳೆ ತೇಜಸ್ ಜೆಟ್ಗಳ ಸೌಲಭ್ಯ ಸೇರಿದಂತೆ ಅವುಗಳ ಉತ್ಪಾದನಾ ಸೌಲಭ್ಯಗಳನ್ನು ಹಾಗೂ ತಾಂತ್ರಿಕ ಸವಲತ್ತುಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಬೆಂಗಳೂರು ಭೇಟಿ ಹಿನ್ನೆಲೆಯಲ್ಲಿ ಹೆಚ್ಎಎಲ್ ಈಗಾಗಲೇ ಅಗತ್ಯ ತಯಾರಿಗಳನ್ನು ಮಾಡಿಕೊಂಡಿದೆ.
ಮಧ್ಯಾಹ್ನ 12.15ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ತೆಲಂಗಾಣದ ದಿಂಡುಗಲ್ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳಸಲಿದ್ದು, ಅಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ, ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಮುಗಿದ ಬಳಿಕ ಪ್ರಧಾನಿ ಮೋದಿ ಅವರು ಇದು ಎರಡನೇ ಬಾರಿಗೆ ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ಆಗಸ್ಟ್ 26ರಂದು ಬೆಂಗಳೂರಿಗೆ ಆಗಮಿಸಿ ಚಂದ್ರಯಾನ 3ರ ಯಶಸ್ಸಿಗೆ ಕಾರಣರಾದ ಇಸ್ರೋ ತಂಡವನ್ನು ಭೇಟಿ ಮಾಡಿ ಅಭಿನಂದಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


