ನವದೆಹಲಿ: ಸುರಂಗ ದುರಂತದಲ್ಲಿ ಸಿಲುಕಿಹಾಕಿಕೊಂಡಿದ್ದ ಕಾರ್ಮಿಕಕರನ್ನು ಹೊರತರುವ ಕಾರ್ಯಾಚರಣೆ ಯಶಸ್ವಿಯಾದ ಬಳಿಕ ಕಾರ್ಮಿಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿಯಲ್ಲಿ ಮಾತನಾಡಿದ್ದಾರೆ. ಎಲ್ಲ ಕಾರ್ಮಿಕರು ಕೊಠಡಿಯಲ್ಲಿ ಹಾಜರಿದ್ದು, ದೂರವಾಣಿ ಮೂಲಕ ಪ್ರಧಾನಿ ಜತೆ ಮಾತನಾಡಿದರು.
ಕಾರ್ಮಿಕರನ್ನು ಯಶಸ್ವಿಯಾಗಿ ಮತ್ತು ಸುರಕ್ಷಿತವಾಗಿ ಹೊರಗೆ ಕರೆದೊಯ್ಯಲು ರಕ್ಷಣಾ ತಂಡದ ಪ್ರಯತ್ನಗಳನ್ನು ಪ್ರಧಾನಿ ಶ್ಲಾಘಿಸಿದ್ದಾರೆ.
“ಉತ್ತರಕಾಶಿಯಲ್ಲಿನ ನಮ್ಮ ಸಹೋದರರ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನು ಭಾವುಕರನ್ನಾಗಿಸುತ್ತಿದೆ. ಸುರಂಗದಲ್ಲಿ ಸಿಲುಕಿರುವ ಸ್ನೇಹಿತರಿಗೆ ನಾನು ಹೇಳಲು ಬಯಸುವುದೇನೆಂದರೆ ನಿಮ್ಮ ಧೈರ್ಯ ಮತ್ತು ತಾಳ್ಮೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ. ನಿಮಗೆಲ್ಲರಿಗೂ ಒಳ್ಳೆಯ ಆರೋಗ್ಯ ಸಿಗಲಿ” ಎಂದು ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
“ದೀರ್ಘಾವಧಿಯ ಕಾಯುವಿಕೆಯ ನಂತರ, ನಮ್ಮ ಈ ಸ್ನೇಹಿತರು ಈಗ ತಮ್ಮ ಪ್ರೀತಿಪಾತ್ರರನ್ನು ಭೇಟಿಯಾಗುತ್ತಾರೆ ಎಂಬುದು ಬಹಳ ತೃಪ್ತಿಯ ವಿಷಯವಾಗಿದೆ. ಈ ಸವಾಲಿನ ಸಮಯದಲ್ಲಿ ಈ ಎಲ್ಲಾ ಕುಟುಂಬಗಳು ತೋರಿದ ತಾಳ್ಮೆ ಮತ್ತು ಧೈರ್ಯವನ್ನು ಪದಗಳಿಂದ ಪ್ರಶಂಸಿಸಲು ಸಾಧ್ಯವಿಲ್ಲ” ಎಂದು ಪ್ರಧಾನಮಂತ್ರಿ ಹೇಳಿದರು.
ಮಹತ್ವಾಕಾಂಕ್ಷೆಯ ಚಾರ್ ಧಾಮ್ ಯೋಜನೆಯ ಭಾಗವಾಗಿರುವ ಸುರಂಗದ ನಿರ್ಮಾಣವು ನವೆಂಬರ್ 12 ರಂದು ಕುಸಿದಿತ್ತು. ಬರೋಬ್ಬರಿ 17 ದಿನಗಳ ನಂತರ ಕಾರ್ಮಿಕರನ್ನು ಹೊರತೆಗೆಯಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.