ನವದೆಹಲಿ: ಇಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ. ಏಡ್ಸ್ ಬಗ್ಗೆ ಜಾಗೃತಿಯನ್ನು ಮೂಡಿಸುವುದು ಈ ದಿನದ ಮಹತ್ವವಾಗಿದೆ. ಮೊದಲ ಬಾರಿಗೆ 1988ರಲ್ಲಿ ಈ ದಿನವನ್ನು ಆಚರಿಸಲಾಯಿತು.
1981ರಲ್ಲಿ ಮೊದಲ ಏಡ್ಸ್ ಪ್ರಕರಣ ವರದಿಯಾದ ನಂತರ, ಸುಮಾರು 25 ಮಿಲಿಯನ್ ಜನರು ಈ ಕಾಯಿಲೆಗೆ ತುತ್ತಾಗಿ ಪ್ರಾಣವನ್ನು ಕಳೆದುಕೊಂಡರು. ಇಂತಹ ಪರಿಸ್ಥಿತಿಯಲ್ಲಿ ಈ ಗಂಭೀರ ಕಾಯಿಲೆಯ ಬಗ್ಗೆ ಜನರಿಗೆ ಶಿಕ್ಷಣ ನೀಡುವ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು 1987ರಲ್ಲಿ ಥಾಮಸ್ ನೆಟ್ಟರ್ ಮತ್ತು ಜೇಮ್ಸ್ ಡಬ್ಲ್ಯೂ ಬನ್ ಅವರು ಏಡ್ಸ್ ದಿನವನ್ನು ಆಚರಿಸುವ ಪರಿಕಲ್ಪನೆಯನ್ನು ಜಾರಿಗೆ ತಂದರು. ಅದರ ಮಾರನೇ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಈ ದಿನವನ್ನು ವಿಶ್ವ ಮಟ್ಟದಲ್ಲಿ ಆಚರಿಸುವ ಘೋಷಣೆಯನ್ನು ಮಾಡಿತು.
ಅಂದಿನಿಂದ ಪ್ರತಿವರ್ಷ ಡಿಸೆಂಬರ್ 1ರಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದ ಮೂಲಕ ಪ್ರತಿಯೊಂದು ದೇಶದ ಸರ್ಕಾರಗಳು ಈ ರೋಗದ ಹರಡುವಿಕೆ ಮತ್ತು ಅದರ ತಡೆಗಟ್ಟುವಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಅನೇಕ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ. ಭಾರತದಲ್ಲೂ ಏಡ್ಸ್ ತಡೆಗಟ್ಟುವ ನಿಟ್ಟಿನಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.