ನವದೆಹಲಿ: ಇತ್ತೀಚಿಗೆ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ. ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಒಂದು ರಾಜ್ಯದ ಚುನಾವಣೆ ಡಿ.4 ರಂದು ಪ್ರಕಟವಾಗಲಿದೆ.
ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ ಮತ್ತು ತೆಲಂಗಾಣಕ್ಕೆ ನಾಳೆ ಮತ ಎಣಿಕೆ ನಡೆಯಲಿದೆ. ಮೀಜೋರಾಂ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ
ಚುನಾವಣಾ ಆಯೋಗವು ಡಿಸೆಂಬರ್ 3 ರಿಂದ ಡಿಸೆಂಬರ್ 4ಕ್ಕೆ ಮಿಜೋರಾಂ ವಿಧಾನಸಭೆಯ ಚುನಾವಣೆಯ ಎಣಿಕೆಯ ದಿನಾಂಕವನ್ನು ಪರಿಷ್ಕರಿಸಿದೆ. ಮಿಜೋರಾಂನ ಜನರಿಗೆ ಡಿಸೆಂಬರ್ 3 ವಿಶೇಷ ಪ್ರಾಮುಖ್ಯತೆಯನ್ನು ಹೊಂದಿರುವ ದಿನವಾದ ಕಾರಣ ಎಣಿಕೆಯ ದಿನಾಂಕವನ್ನು ಬದಲಾಯಿಸಲು ವಿವಿಧ ವಲಯಗಳಿಂದ ಹಲವಾರು ಪ್ರತಿನಿಧಿಗಳು ಮನವಿ ಮಾಡಿದ ನಂತರ ಎಣಿಕೆಯ ದಿನಾಂಕವನ್ನು ಬದಲಾಯಿಸಲು ಆಯೋಗವು ನಿರ್ಧರಿಸಿದೆ.
ಫಲಿತಾಂಶಕ್ಕೂ ಮುಂಚಿತವಾಗಿ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಬರಲಿದೆ ಎಂಬುದಾಗಿ ಬಹುತೇಕ ಸಮೀಕ್ಷೆಗಳು ಹೇಳಿಕೆ. ಉಳಿದ ಎಲ್ಲಾ ರಾಜ್ಯಗಳಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತವನ್ನು ಸಮೀಕ್ಷೆ ನೀಡಿಲ್ಲ. ಮಧ್ಯಪ್ರದೇಶದಲ್ಲಿ ಬಿಜೆಪಿ ಪರವಾಗಿ ಜನಾದೇಶವಿದೆ ಎಂದು ಸಮೀಕ್ಷೆಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.