ನವದೆಹಲಿ: ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಇಂದು ನವದೆಹಲಿಯಲ್ಲಿ “ನಯೇ ಭಾರತ್ ಕಾ ಸಂವೇದ” ಪುಸ್ತಕವನ್ನು ಬಿಡುಗಡೆ ಮಾಡಿದರು. ಈ ಪುಸ್ತಕವು ಭಾರತೀಯ ಸಂವಿಧಾನದ ಕುರಿತ ಪ್ರಧಾನಿ ನರೇಂದ್ರ ಮೋದಿಯವರ ಭಾಷಣಗಳ ಸಂಕಲನವಾಗಿದೆ.
ಕೋವಿಂದ್ ಅವರು ತಮ್ಮ ಮುಖ್ಯ ಭಾಷಣದಲ್ಲಿ, ರಾಷ್ಟ್ರದ ಪ್ರತಿಯೊಬ್ಬ ನಾಗರಿಕರಿಗೂ ಸಂವಿಧಾನದ ಬಗ್ಗೆ ಸಾಕಷ್ಟು ಜ್ಞಾನವಿದ್ದರೆ ಎಲ್ಲವೂ ಸುಲಭವಾಗುತ್ತದೆ. ಸಂವಿಧಾನ ರಚನೆಕಾರರು ಸಮಾಜದ ಕಟ್ಟಕಡೆಯ ವ್ಯಕ್ತಿಯ ಬಗ್ಗೆ ಕಾಳಜಿ ಹೊಂದಿದ್ದರು ಎಂಬುದನ್ನು ನಾಗರಿಕರು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಪುಸ್ತಕದ ಕುರಿತು ಮಾತನಾಡಿದ ಕೋವಿಂದ್, ಪ್ರಧಾನಿ ಮೋದಿ ಪದೇ ಪದೇ ಸಂವಿಧಾನವನ್ನು ನೆನಪಿಸಿಕೊಳ್ಳುತ್ತಾರೆ ಮತ್ತು ಅದರ ಬಗ್ಗೆ ಸಾಧ್ಯವಾದಷ್ಟು ತಿಳಿದುಕೊಳ್ಳಲು ಜನರನ್ನು ಒತ್ತಾಯಿಸುತ್ತಾರೆ. ಪ್ರಧಾನ ಮಂತ್ರಿಗಳು ಭಾರತದ ಸಂವಿಧಾನವನ್ನು ನೀತಿ ಸಂಹಿತೆ ಮತ್ತು ಸರ್ಕಾರಕ್ಕೆ ಮಾರ್ಗದರ್ಶನ ನೀಡುವ ಏಕೈಕ ಪುಸ್ತಕ ಎಂದು ಬಣ್ಣಿಸುತ್ತಾರೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.