ನವದೆಹಲಿ: ವಿಶ್ವದ ಶೇಕಡಾ 50 ರಷ್ಟು ಡಿಜಿಟಲ್ ವಹಿವಾಟುಗಳು ಭಾರತದಿಂದಲೇ ನಡೆದಿದೆ ಎಂದು ಕೇಂದ್ರ ಸಚಿವ ಡಾ ವಿ.ಕೆ ಸಿಂಗ್ ಹೇಳಿದ್ದಾರೆ.
ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿ.ಕೆ ಸಿಂಗ್, ಕಳೆದ ಒಂಬತ್ತು ವರ್ಷಗಳಲ್ಲಿ ಡಿಜಿಟಲೀಕರಣ ವ್ಯವಸ್ಥೆಯಲ್ಲಿ ದೊಡ್ಡ ಪರಿವರ್ತನೆಯಾಗಿದೆ. ದೇಶದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿನ ವಹಿವಾಟಿನ ಪ್ರಮಾಣವು ಶೇಕಡಾ 1000ಕ್ಕೂ ಹೆಚ್ಚು ಹೆಚ್ಚಾಗಿದೆ. ಇಂಟರ್ನೆಟ್ ಡೇಟಾ ದರವು ವಿಶ್ವದಲ್ಲೇ ಅತ್ಯಂತ ಕಡಿಮೆಯಾಗಿದೆ ಎಂದು ಅವರು ಹೇಳಿದರು.
ಉಕ್ಕು ಉದ್ಯಮದ ಬೆಳವಣಿಗೆಗೆ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಜಾಗತಿಕ ಉತ್ಪಾದನೆ ಶೇ.4.2ಕ್ಕೆ ಹೋಲಿಸಿದರೆ ಭಾರತದಲ್ಲಿ ಉಕ್ಕು ಉತ್ಪಾದನೆ ಶೇ.5.5ರಷ್ಟು ಪ್ರಗತಿ ಕಂಡಿದೆ. 2013ರಲ್ಲಿ ಉಕ್ಕಿನ ಉತ್ಪಾದನೆಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದ ಭಾರತ ಈಗ 2ನೇ ಅತಿದೊಡ್ಡ ಉತ್ಪಾದಕ ರಾಷ್ಟ್ರವಾಗಿದೆ ಎಂದು ಸಚಿವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.