ರಾಯ್ಪರ: ಛತ್ತೀಸ್ಗಢದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಆಯ್ಕೆ ನಡೆದಿದ್ದು, ಪ್ರಮಾಣ ವಚನ ಸಮಾರಂಭದ ದಿನಾಂಕವನ್ನೂ ಪ್ರಕಟಿಸಲಾಗಿದೆ. ನಿಯೋಜಿತ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, ಉಪ ಮುಖ್ಯಮಂತ್ರಿಗಳಾದ ಅರುಣ್ ಸಾವೋ ಮತ್ತು ವಿಜಯ್ ಶರ್ಮಾ ಮತ್ತು ಸಚಿವರು ಡಿಸೆಂಬರ್ 13 ರಂದು ರಾಯ್ಪುರದ ಪೊಲೀಸ್ ಪರೇಡ್ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಾಜಿ ಸಿಎಂ ರಮಣ್ ಸಿಂಗ್ ಛತ್ತೀಸ್ಗಢ ವಿಧಾನಸಭೆಯ ಸ್ಪೀಕರ್ ಆಗುವ ಸಾಧ್ಯತೆ ಇದೆ.
ನಿನ್ನೆ ಸಂಜೆ ವಿಷ್ಣು ದೇವ ಸಾಯಿ ಅವರು ರಾಜ್ಯಪಾಲ ಬಿಸ್ವಭೂಷಣ ಹರಿಚಂದನ್ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಛತ್ತೀಸ್ಗಢದ ಬಿಜೆಪಿಯ ಹೊಸದಾಗಿ ಆಯ್ಕೆಯಾದ 54 ಶಾಸಕರ ಪ್ರಮುಖ ಸಭೆಯು ರಾಯ್ಪುರದಲ್ಲಿ ನಡೆದ ನಂತರ ಭಾನುವಾರ ಮಧ್ಯಾಹ್ನ ವಿಷ್ಣು ದೇವ್ ಸಾಯಿ ಅವರ ಹೆಸರನ್ನು ಛತ್ತೀಸ್ಗಢದ ಮುಖ್ಯಮಂತ್ರಿಯಾಗಿ ಘೋಷಿಸಲಾಯಿತು.
ಪ್ರತಿಯೊಬ್ಬರ ನಂಬಿಕೆಯನ್ನು ಗಳಿಸಲು ಬಿಜೆಪಿ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತದೆ ಎಂದು ಹೇಳಿದ ಸಾಯಿ, ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಗಳನ್ನು ಈಡೇರಿಸುವುದಾಗಿ ಪ್ರತಿಜ್ಞೆ ಮಾಡಿದರು. ಪ್ರಾಮಾಣಿಕತೆಯಿಂದ ‘ಸಬ್ಕಾ ವಿಶ್ವಾಸ’ಕ್ಕಾಗಿ ಕೆಲಸ ಮಾಡುತ್ತೇನೆ ಮತ್ತು ‘ಮೋದಿ ಕಿ ಗ್ಯಾರಂಟಿ’ ಅಡಿಯಲ್ಲಿ ಛತ್ತೀಸ್ಗಢದ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲಾಗುವುದು, ರಾಜ್ಯದ ಮುಖ್ಯಮಂತ್ರಿಯಾಗಿ ನಾವು ಭರವಸೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇವೆ ಎಂದು ವಿಷ್ಣು ದೇವ್ ಸಾಯಿ ಹೇಳಿದ್ದಾರೆ.
ಇತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವ ಉತ್ತರ ಛತ್ತೀಸ್ಗಢದ ಕುಂಕೂರಿಯಿಂದ ಸಾಯಿ ಗೆದ್ದಿದ್ದಾರೆ. ಕುಂಕುರಿ ವಿಧಾನಸಭಾ ಕ್ಷೇತ್ರದಲ್ಲಿ ಅವರು ಒಟ್ಟು 87,604 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ಸಾಯಿ ಬಿಜೆಪಿಯಲ್ಲಿ ಪ್ರಮುಖ ವ್ಯಕ್ತಿಯಾಗಿದ್ದು, ಮಾಜಿ ರಾಜಾಧ್ಯಕ್ಷ ಮತ್ತು ಮಾಜಿ ಕೇಂದ್ರ ಸಚಿವ ಸೇರಿದಂತೆ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಸಾಯಿ ಅವರು ಪ್ರಭಾವಿ ಸಾಹು (ತೆಲಿ) ಸಮುದಾಯದಿಂದ ಬಂದವರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.