ಗುವಾಹಟಿ: ಆಲ್ ಅಸ್ಸಾಂ ಸ್ಟುಡೆಂಟ್ಸ್ ಯೂನಿಯನ್ (AASU)ನ ಮಾಜಿ ಕಾರ್ಯದರ್ಶಿ ಸೇರಿದಂತೆ ಯೂನಿಯನ್ನ 300 ಕ್ಕೂ ಹೆಚ್ಚು ಮಾಜಿ ನಾಯಕರು ಮತ್ತು ಕಾರ್ಯಕರ್ತರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡರು.
ಗುವಾಹಟಿಯಲ್ಲಿರುವ ಅಸ್ಸಾಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಭಾಬೇಶ್ ಕಲಿತಾ, ಅಸ್ಸಾಂ ಸಚಿವ ಪಿಜುಶ್ ಹಜಾರಿಕಾ ಮತ್ತು ಇತರ ಹಿರಿಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಮಾಜಿ ಎಎಎಸ್ಯು ಮುಖಂಡರು ಮತ್ತು ಕಾರ್ಯಕರ್ತರು ಕೇಸರಿ ಪಕ್ಷಕ್ಕೆ ಸೇರ್ಪಡೆಗೊಂಡರು ಎಂದು ವರದಿಗಳು ತಿಳಿಸಿವೆ.
ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಸಕಲ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ಅನೇಕರು ಬಿಜೆಪಿಗೆ ಸೇರಲು ಮುಂದಾಗುತ್ತಿದ್ದಾರೆ. ಅಸ್ಸಾಂ ಸಚಿವ ಪಿಜೂಶ್ ಹಜಾರಿಕಾ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿ, ‘ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳ ಹಲವು ಮುಖಂಡರು ಪಕ್ಷಕ್ಕೆ ಸೇರಲು ಬಿಜೆಪಿ ನಾಯಕತ್ವವನ್ನು ಸಂಪರ್ಕಿಸಿದ್ದಾರೆ’ ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ ಅಸ್ಸಾಂನ ಬಿಜೆಪಿ ಶಾಸಕ ದಿಗಂತ ಕಲಿತಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ಧ ದೇಶದ ಜನತೆ ಈಗ ಹೊರ ಬರುತ್ತಿದ್ದು, ಕಾಂಗ್ರೆಸ್ ಮುಕ್ತ ಭಾರತ ಸಾಕಾರಗೊಳ್ಳಲಿದೆ ಎಂದು ಹೇಳಿದ್ದಾರೆ. “ಕಾಂಗ್ರೆಸ್ನ ಭ್ರಷ್ಟಾಚಾರದ ವಿರುದ್ಧ ರಾಷ್ಟ್ರದ ಜನರು ಈಗ ಹೊರಬರುತ್ತಿದ್ದಾರೆ ಮತ್ತು ಕಾಂಗ್ರೆಸ್ ಮುಕ್ತ ಭಾರತವು ನಿಜವಾಗಲಿದೆ. ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮಹಾ ವಿಜಯದ ನಂತರ, ರಾಷ್ಟ್ರದ ಮನಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ” ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.