ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಕಾಲ ನಡೆದ ಚಳಿಗಾಲದ ವಿಧಾನಮಂಡಲದ ಅಧಿವೇಶನ ಶುಕ್ರವಾರ ಅಂತ್ಯಗೊಂಡಿದೆ.
ಡಿಸೆಂಬರ್ 4 ರಿಂದ 15 ರವರೆಗೆ 66 ಗಂಟೆಗಳ ಕಾಲ ನಡೆದ ಅಧಿವೇಶನದಲ್ಲಿ 17 ಮಸೂದೆಗಳನ್ನು ಅಂಗೀಕರಿಸಲಾಗಿದೆ ಮತ್ತು 150 ಗಮನ ಸೆಳೆಯುವ ಪ್ರಸ್ತಾಪಗಳನ್ನು ಮಂಡಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಮಾಹಿತಿ ನೀಡಿದ್ದಾರೆ
ನಿನ್ನೆ ಶುಕ್ರವಾರ ಅಧಿವೇಶನ ಮುಗಿದ ನಂತರ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಸ್ಪೀಕರ್ , ಅಧಿವೇಶನ ಸುಗಮವಾಗಿ ನಡೆಯಿತು. 10 ದಿನಗಳ ಅಧಿವೇಶನದಲ್ಲಿ ಪ್ರಮುಖ ವಿಷಯಗಳ ಕುರಿತು ಹಲವಾರು ಚರ್ಚೆಗಳು ನಡೆದವು. ಉತ್ತರ ಕರ್ನಾಟಕ ಮತ್ತು ಬರ ಸೇರಿದಂತೆ ಹೆಚ್ಚಿನ ಚರ್ಚೆಗಳಲ್ಲಿ ಕನಿಷ್ಠ ಶೇಕಡಾ 80ರಷ್ಟು ಶಾಸಕರು ಭಾಗವಹಿಸಿದರು ಎಂದು ಮಾಹಿತಿ ನೀಡಿದ್ದಾರೆ.
10 ದಿನಗಳ ಅಧಿವೇಶನದಲ್ಲಿ ಹಲವು ವಿಧೇಯಕಗಳು ಅಂಗೀಕಾರಗೊಂಡಿದ್ದು, ಬೆಳಗಾವಿ, ಹುಬ್ಬಳ್ಳಿ, ವಿಜಯಪುರ ಮತ್ತು ಶಿವಮೊಗ್ಗದ ವಿಮಾನ ನಿಲ್ದಾಣಗಳಿಗೆ ನಾಮಕರಣಕ್ಕೆ ಸಂಬಂಧಿಸಿದ ವಿಧೇಯಕ ಮತ್ತು ವಕೀಲರ ರಕ್ಷಣೆಗಾಗಿನ ವಿಧೇಯಕ ಸೇರಿದೆ ಎಂದು ಅವರು ಹೇಳಿದರು.
ವಿಧಾನಮಂಡಲದ ಅಧಿವೇಶನ ಹೊರತುಪಡಿಸಿ ವರ್ಷದ ಬಹುತೇಕ ಭಾಗ ಖಾಲಿ ಇರುವ ಸುವರ್ಣ ವಿಧಾನಸೌಧವನ್ನು ಸದುಪಯೋಗಪಡಿಸಿಕೊಂಡು ವಿವಿಧ ಸೌಲಭ್ಯಗಳನ್ನು ಕಲ್ಪಿಸಿ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.