ಬೆಂಗಳೂರು: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ವಿವಸ್ತ್ರಗೊಳಿಸಿ ಮಹಿಳೆಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿಯ ನಿಯೋಗ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಆಕೆಯ ಆರೋಗ್ಯ ವಿಚಾರಿಸಿದೆ. ಪ್ರಕರಣದ ಸಂಬಂಧ ತನಿಖೆ ನಡೆಸಲು ರಚಿಸಲಾದ ಬಿಜೆಪಿ ಸತ್ಯ ಶೋಧನಾ ತಂಡದ ಸದಸ್ಯರಾದ ಅಪರಾಜಿತ್ ಸಾರಂಗಿ, ಸುನೀತಾ ದುಗ್ಗಲ್, ರಂಜಿತಾ ಕೋಳಿ, ಲಾಕೆಟ್ ಚಟರ್ಜಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಕ್ರಾ ಮಹಿಳೆಯನ್ನು ಭೇಟಿಯಾದರು.
ಕೇಂದ್ರದ ಈ ತಂಡಕ್ಕೆ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಡಾ.ರಾಜೇಶ ನೆರ್ಲಿ, ಬೆಳಗಾವಿ ಮೇಯರ್ ಶೋಭಾ ಸೋಮನಾಚೆ, ಉಪಮೇಯರ್ ರೇಶ್ಮಾ ಪಾಟೀಲ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಶಶಿಕಲಾ ಜೊಲ್ಲೆ, ಅಭಯ ಪಾಟೀಲ, ಮಾಜಿ ಎಂ.ಎಲ್.ಸಿ ಮಹಾಂತೇಶ ಕವಟಗಿಮಠ, ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವಣಾಚೆ, ಮುಖಂಡರಾದ ಬಸವರಾಜ ಹುಂದ್ರಿ ಹಾಗೂ ಪವನ ಕತ್ತಿ ಅಮಾನವೀಯ ಕೃತ್ಯದ ಕುರಿತ ಮಾಹಿತಿಗಳನ್ನು ನೀಡಿದರು.
ಘಟನೆ ನಡೆದ ವಂಟಮೂರಿ ಹಾಗೂ ಕಾಕತಿ ಪೊಲೀಸ್ ಠಾಣೆಗೂ ನಿಯೋಗ ಭೇಟಿ ನೀಡಲಿದೆ. ಇನ್ನೊಂದೆಡೆ ದಲಿತ ಮಹಿಳೆಯ ಮೇಲಿನ ಅಮಾನವೀಯ ಘಟನೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ಬಂಧನ ಮಾಡದ ಪೊಲೀಸರ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.