ಅಗರ್ತಾಲ: ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯ ಮಾಣಿಕ್ಯನಗರ ಗ್ರಾಮದಲ್ಲಿ ಶುಕ್ರವಾರ ಗಡಿ ಭದ್ರತಾ ಪಡೆ (ಬಿಎಸ್ಎಫ್) ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಬೆಳೆಸಲಾಗಿದ್ದ ಅಂದಾಜು 40,000 ರೂಪಾಯಿ ಮೌಲ್ಯದ ಗಾಂಜಾ ಗಿಡಗಳನ್ನು ನಾಶಪಡಿಸಿದೆ. ಈ ಗ್ರಾಮವು ರಹೀಂಪುರ ಪ್ರದೇಶದಲ್ಲಿದ್ದು, ಇದು ಕಲಾಂಚೌರಾ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ.
ಇದರ ಜೊತೆಗೆ ಅರಣ್ಯ ಭೂಮಿಯಲ್ಲಿ ಸುಮಾರು 18 ಹೆಕ್ಟೇರ್ ಪ್ರದೇಶದಲ್ಲಿ ಏಳು ವಿವಿಧ ಪ್ಲಾಟ್ಗಳಲ್ಲಿ ಇದ್ದ ಗಾಂಜಾ ಗಿಡಗಳನ್ನು ಕಡಿದು, ಕಿತ್ತು ಸುಟ್ಟು ಹಾಕಲಾಗಿದೆ. ಈ ಋತುವಿನಲ್ಲಿ, ಇಲ್ಲಿಯವರೆಗೆ, ತ್ರಿಪುರಾ ರಾಜ್ಯದ ವಿವಿಧ ಭಾಗಗಳಲ್ಲಿ ಒಟ್ಟು 4,02,400 ಸಸ್ಯಗಳನ್ನು ನಾಶಪಡಿಸಲಾಗಿದೆ ಮತ್ತು ಸುಮಾರು 300 ಎಕರೆ ಅರಣ್ಯ ಭೂಮಿಯನ್ನು BSF ಮತ್ತು ಇತರ ಏಜೆನ್ಸಿಗಳು ಜಂಟಿ ಕಾರ್ಯಾಚರಣೆಗಳನ್ನು ನಡೆಸಿ ವಶಕ್ಕೆ ಪಡೆದುಕೊಂಡಿವೆ.
ಈ ತಿಂಗಳ ಆರಂಭದಲ್ಲಿ, ಅಸ್ಸಾಂ ಪೊಲೀಸರು ಅಸ್ಸಾಂ-ತ್ರಿಪುರಾ ಗಡಿಯುದ್ದಕ್ಕೂ ಕರೀಮ್ಗಂಜ್ ಜಿಲ್ಲೆಯಲ್ಲಿ ಟ್ರಕ್ನಿಂದ 630 ಕೆಜಿಗೂ ಹೆಚ್ಚು ಗಾಂಜಾವನ್ನು ವಶಪಡಿಸಿಕೊಂಡಿದೆ. ರಹಸ್ಯ ಮಾಹಿತಿಯ ಆಧಾರದ ಮೇಲೆ ಕರೀಂಗಂಜ್ ಜಿಲ್ಲಾ ಪೊಲೀಸರು ಅಸ್ಸಾಂ-ತ್ರಿಪುರಾ ಗಡಿಯಲ್ಲಿರುವ ಚುರೈಬರಿ ಪ್ರದೇಶದಲ್ಲಿ ಟ್ರಕ್ ಅನ್ನು ತಡೆದಾಗ ಅದರಲ್ಲಿ ಗಾಂಜಾ ಪತ್ತೆಯಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.