ಬೆಳ್ತಂಗಡಿ : ಮದ್ಯವ್ಯಸನದ ವಿರುದ್ದ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸುತ್ತಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಆಶಯದ ಕಾರ್ಯಕ್ರಮ ಜನಜಾಗೃತಿ ವೇದಿಕೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ಶಾಖೆಯನ್ನು ಹೊಂದಿದೆ. ಗಾಂಧಿ ಕಂಡ ಮದ್ಯಮುಕ್ತ ಭಾರತದ ಕನಸನ್ನು ಜನರಿಗೆ ನೆನಪು ಮಾಡಿಕೊಡುವ ಉದ್ದೇಶದಿಂದ ಅ. 2ರ ಗಾಂಧಿಜಯಂತಿಯಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯು ರಾಜ್ಯಾಧ್ಯಂತ ಸಮಾವೇಶಗಳನ್ನು ಏರ್ಪಡಿಸುತ್ತಿದೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಸತೀಶ್ ಹೊನ್ನವಳ್ಳಿ ಹಾಗೂ ಕಾರ್ಯದರ್ಶಿ ವಿವೇಕ್ ವಿ. ಪಾಸ್ ತಿಳಿಸಿದ್ದಾರೆ.
ಸಮಾಜದ, ಗಣ್ಯರ ಮೇಲ್ವಿಚಾರಣೆಯಲ್ಲಿ ನಡೆಯುತ್ತಿರುವ ವೇದಿಕೆಯು ಇತ್ತೀಚಿನ ದಿನಗಳಲ್ಲಿ ತನ್ನ ಮದ್ಯವರ್ಜನ ಕಾರ್ಯಕ್ರಮಗಳ ಮುಖೇನ ಸಾಮಾನ್ಯ ಜನರ ಗಮನ ಸೆಳೆಯುತ್ತಿದೆ.
ಕಳೆದ ಒಂದು ವರ್ಷದಲ್ಲಿಯೇ 123 ಮದ್ಯವರ್ಜನ ಶಿಬಿರಗಳನ್ನು ನಡೆಸಿ 51,524 ಜನರನ್ನು ಕುಡಿತ ಬಿಡಿಸಿದ ಖ್ಯಾತಿ ಜನಜಾಗೃತಿ ವೇದಿಕೆಯದ್ದಾಗಿದೆ. ಇದೇ ಸಂಧರ್ಭ ಮದ್ಯಪಾನದ ದುರಂತಗಳ ಕುರಿತು ಅರಿವು ಮೂಡಿಸುವಿಕೆ, ಮದ್ಯಮುಕ್ತರಿಗೆ ಅಭಿನಂದನೆ, ಸಮಾಜದ ಗಣ್ಯರನ್ನು ಈ ಚಳುವಳಿಯತ್ತ ಗಮನ ಸೆಳೆಯುವುದು ಮತ್ತು ಸರಕಾರದ ಅಬಕಾರಿ ನೀತಿಯ ಬಗ್ಗೆ ಗಮನ ಸೆಳೆಯುವುದು ಇವೇ ಮುಂತಾದ ವಿಚಾರಗಳನ್ನು ಈ ಸಂಧರ್ಭದಲ್ಲಿ ಕೈಗೊಳ್ಳಲಾಗುತ್ತಿದೆ.
ಈ ಬಾರಿ ಅ.2ರ ಗಾಂಧಿಜಯಂತಿಯನ್ನು ರಾಜ್ಯಾಧ್ಯಂತ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ಕಾರ್ಯಕ್ರಮ ರೂಪಿಸಲಾಗಿದೆ. ರಾಜ್ಯಾದ್ಯಂತ 105 ಕಡೆಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸುಮಾರು 10 ಲಕ್ಷ ಜನರಿಗೆ ದುಶ್ಚಟಗಳ ವಿರುದ್ದ ಜಾಗೃತಿ ಮೂಡಿಸಲು ಕಾರ್ಯಕ್ರಮ ರೂಪಿಸಲಾಗಿದೆ.
ಸುಳ್ಯ ತಾಲೂಕಿನ ವಲ್ಲೀಶ ಸಭಾಭವನ ಸುಬ್ರಹ್ಮಣ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ಶಾಸಕ ಎಸ್. ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಆಯುಕ್ತ ಮತ್ತು ಆಡಳಿತಾಧಿಕಾರಿ ಸತೀಶ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಸತೀಶ್ ಹೊನ್ನವಳ್ಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸುಬ್ರಹ್ಮಣ್ಯ ಕೆ.ಎಸ್.ಎಸ್.ಕಾಲೇಜಿನ ಪ್ರಾಂಶುಪಾಲ ಮನಮೋಹನ್, ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಠಲ ರಾವ್, ಜಿ.ಪಂ. ಸದಸ್ಯ ಕೆ. ಎಸ್. ದೇವರಾಜ್, ಗ್ರಾ. ಪಂ. ಅಧ್ಯಕ್ಷೆ ಸುಶೀಲಾ ಹೆಚ್. ಉಪಸ್ಥಿತರಿರುವರು.
ತಾಲೂಕಿನಲ್ಲಿ ಮದ್ಯಮುಕ್ತರಾದ ನವಜೀವನ ಸದಸ್ಯರು, ಸ್ವಯಂ ಸೇವಕರು, ವೇದಿಕೆಯ ಪದಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳದ ಅಭಿಮಾನಿ ಬಳಗದವರು, ಯೋಜನೆ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.