ಮಡಿಕೇರಿ: ನೆರೆಯ ಕೇರಳದಲ್ಲಿ ಕೋವಿಡ್-19 ಸಬ್ ವೇರಿಯೆಂಟ್ JN.1 ರ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಕೆಮ್ಮು, ಕಫ ಮತ್ತು ಜ್ವರದ ಲಕ್ಷಣಗಳನ್ನು ಹೊಂದಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸರ್ಕಾರ ಸೋಮವಾರ ತಿಳಿಸಿದೆ.
60 ವರ್ಷ ತುಂಬಿದವರು, ಹೃದಯ ಸಂಬಂಧಿ ಸಮಸ್ಯೆ, ಕೋವಿಡ್ ಲಕ್ಷಣ ಹೊಂದಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸೋಮವಾರ ಕುಶಾಲನಗರದ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಕೋವಿಡ್ ಪರೀಕ್ಷೆ ಹೆಚ್ಚಿಸಲಾಗುತ್ತಿದೆ, ಆರೋಗ್ಯ ತೊಂದರೆ ಹಾಗೂ ಕೋವಿಡ್ ಲಕ್ಷಣ ಹೊಂದಿರುವವರಿಗೆ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಅನಗತ್ಯ ಆತಂಕ ಬೇಡ ಎಂದರು. ಮಾಸ್ಕ್ ಕಡ್ಡಾಯ ಹಾಗೂ ಜನರ ಓಡಾಟದ ಮೇಲೆ ನಿರ್ಬಂಧ ಹೇರುವ ಸ್ಥಿತಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಇಂತಹ ರೋಗಲಕ್ಷಣಗಳು ಇರುವವರನ್ನು ಮತ್ತು ಶಂಕಿತ ಪ್ರಕರಣಗಳಿರುವವರನ್ನು ಹೆಚ್ಚಿದ ಪರೀಕ್ಷೆಗಳಿಗೆ ಒಳಪಡಿಸುವಂತೆ ಮತ್ತು ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಜನರ ಚಲನವಲನ ಮತ್ತು ಗುಂಪುಗೂಡುವಿಕೆಯ ಮೇಲೆ ಯಾವುದೇ ನಿರ್ಬಂಧದ ಅಗತ್ಯವಿಲ್ಲ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.