ಭೋಪಾಲ್: ಮಧ್ಯಪ್ರದೇಶದ 16ನೇ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಈ ವೇಳೆ ಮಹತ್ವದ ಬೆಳವಣಿಗೆ ನಡೆದಿದೆ. ವಿಧಾನಸೌಧದ ಸ್ಪೀಕರ್ ಕುರ್ಚಿಯ ಹಿಂಬದಿಯ ಒಂದು ಬದಿಯಲ್ಲಿ ಇದ್ದ ಮಾಜಿ ಪ್ರಧಾನಿ ದಿವಂಗತ ಜವಾಹರಲಾಲ್ ನೆಹರು ಅವರ ಭಾವಚಿತ್ರವನ್ನು ತೆಗೆದು ಆ ಜಾಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಅಳವಡಿಸಲಾಗಿದೆ.
ಈ ಬದಲಾವಣೆಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರು ಜವಾಹರಲಾಲ್ ನೆಹರೂ ಅವರ ಭಾವಚಿತ್ರವನ್ನು ಮರು ಅಳವಡಿಸುವಂತೆ ಒತ್ತಾಯಿಸಿದರು. ಚಿತ್ರವನ್ನು ಅದರ ಮೂಲ ಸ್ಥಿತಿಗೆ ತರದಿದ್ದರೆ, ಕಾಂಗ್ರೆಸ್ ಶಾಸಕರೇ ಆ ಕೆಲಸ ಮಾಡುತ್ತಾರೆ ಎಂದು ಪಕ್ಷ ಎಚ್ಚರಿಸಿದೆ.
ಹಂಗಾಮಿ ಸ್ಪೀಕರ್ ಗೋಪಾಲ್ ಭಾರ್ಗವ ಅವರು ನೂತನವಾಗಿ ಆಯ್ಕೆಯಾದ ಸದಸ್ಯರನ್ನು ಸದನಕ್ಕೆ ಸ್ವಾಗತಿಸಿ ಪ್ರಮಾಣ ವಚನ ಬೋಧಿಸುವ ಪ್ರಕ್ರಿಯೆ ಆರಂಭಿಸುವುದರೊಂದಿಗೆ ಅಧಿವೇಶನ ಆರಂಭವಾಯಿತು.
ಮುಖ್ಯಮಂತ್ರಿ ಮೋಹನ್ ಯಾದವ್ ನೇತೃತ್ವದ ಹೊಸ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಸುಮಾರು ಒಂದು ವಾರದ ನಂತರ ನಾಲ್ಕು ದಿನಗಳ ಚಳಿಗಾಲದ ಅಧಿವೇಶನ ಪ್ರಾರಂಭವಾಯಿತು.
ಕಾಂಗ್ರೆಸ್ನಿಂದ ಉಮಂಗ್ ಸಿಂಘಾರ್ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ (ಎಲ್ಒಪಿ) ಪಕ್ಷದಿಂದ ಆಯ್ಕೆ ಮಾಡಲಾಗಿದೆ ಎಂದು ಹಂಗಾಮಿ ಸ್ಪೀಕರ್ ಸದನಕ್ಕೆ ಮಾಹಿತಿ ನೀಡಿದರು. ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ವಿಧಾನಸಭಾ ಸ್ಪೀಕರ್ ಹುದ್ದೆಗೆ ನಾಮನಿರ್ದೇಶನ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.