ಪಾಲ್ತಾಡಿ : ಯುವಕ ಮಂಡಲಗಳು ಸಮಾಜದ ಅಭಿವೃದ್ದಿ ಶ್ರಮಿಸಬೇಕು, ಸ್ವಹಿತಾಸಕ್ತಿ ಬಿಟ್ಟು ಸಮಾಜದ ಬೆಳವಣಿಗೆಗೆ ಕಾರಣವಾಗಬೇಕು ಎಂದು ದ.ಕ.ಜಿಲ್ಲಾ ಯುವಜನ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು ಹೇಳಿದರು.
ಅವರು ಪಾಲ್ತಾಡಿಯ ಮಂಜುನಾಥನಗರದಲ್ಲಿ ವಿವೇಕಾನಂದ ಯುವಕ ಮಂಡಲದ ಪದಗ್ರಹಣ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
ಸಮಾಜದಲ್ಲಿರುವ ಜ್ವಲಂತ ಸಮಸ್ಯೆಗಳ ನಿರ್ಮೂಲನೆಗೆ ಸಂಘಟನೆಗಳು ಪ್ರಯತ್ನಿಸಿ ಮೂಲಭೂತ ಅವಶ್ಯಕತೆಗಳನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಬಿ.ಕೆ.ರಮೇಶ್ ವಹಿಸಿದ್ದರು.
ವೇದಿಕೆಯಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ಬಿ.ಕೆ.ಇಂದಿರಾ ಕಲ್ಲೂರಾಯ , ಉಪಾಧ್ಯಕ್ಷ ರವಿಕುಮಾರ್ , ಪಾಲ್ತಾಡಿ ಚೈತನ್ಯ ರೈತಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ,ಸಿದ್ದಿ ವಿನಾಯಕ ಸೇವಾ ಸಂಘದ ಗೌರವಾಧ್ಯಕ್ಷ ಸುಧಾಕರ ರೈ ಕುಂಜಾಡಿ , ಅಧ್ಯಕ್ಷ ಈಶ್ವರ್ ಕೆ.ಎಸ್ , ವಿವೇಕಾನಂದ ಯುವಕ ಮಂಡಲದ ಗೌರವಾಧ್ಯಕ್ಷ ಸುದೀರ್ ಕುಮಾರ್ ರೈ ಕುಂಜಾಡಿ ಉಪಸ್ಥಿತರಿದ್ದರು.
ಯುವಕ ಮಂಡಲದ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್ ರೈ ಬೈಲಾಡಿ ಸ್ವಾಗತಿಸಿ ,ಕಾರ್ಯದರ್ಶಿ ಉದಯ ಬಿ.ಆರ್ ವಂದಿಸಿದರು.ನ್ಯಾಯವಾದಿ ಪ್ರವೀಣ್ ಬಿ.ಬಂಬಿಲದೋಳ ಕಾರ್ಯಕ್ರಮ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.