ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 99ನೇ ಜನ್ಮದಿನವಾದ ಇಂದು ಸರ್ಕಾರ ಉತ್ತಮ ಆಡಳಿತ ದಿನವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದೇಶವ್ಯಾಪಿಯಾಗಿ ಅಟಲ್ ಅವರಿಗೆ ಗೌರವ ನಮನವನ್ನು ಸಲ್ಲಿಸಲಾಗುತ್ತಿದೆ.
ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಹಲವಾರು ಸಚಿವರು ಬಿಜೆಪಿಯ ಧೀಮಂತ ನಾಯಕನ ‘ಸದೈವ್ ಅಟಲ್’ ಸ್ಮಾರಕಕ್ಕೆ ತೆರಳಿ ಪುಷ್ಪ ನಮನವನ್ನು ಸಲ್ಲಿಸಿದರು.
2047 ರಲ್ಲಿ ಭಾರತದ ಸ್ವಾತಂತ್ರ್ಯದ ಶತಮಾನೋತ್ಸವದವರೆಗಿನ ಅವಧಿಯ ‘ಅಮೃತ್ ಕಾಲ’ ಸಮಯದಲ್ಲಿ ವಾಜಪೇಯಿ ಅವರ ಸಮರ್ಪಣೆ ಮತ್ತು ದೇಶಕ್ಕಾಗಿ ಸೇವೆಯ ಮನೋಭಾವವು ಸ್ಫೂರ್ತಿಯ ಮೂಲವಾಗಿದೆ ಎಂದು ಮೋದಿ ಎಕ್ಸ್ನಲ್ಲಿ ಹೇಳಿದರು.
ಮಹಾನ್ ವಾಗ್ಮಿ, ವಾಜಪೇಯಿ ಅವರು ಭಾರತೀಯ ಜನಸಂಘ ಮತ್ತು ನಂತರ ಭಾರತೀಯ ಜನತಾ ಪಾರ್ಟಿಯ ಮೇರು ನಾಯಕನಾಗಿದ್ದರು.
ಪ್ರಧಾನಿ ಮೋದಿ ಖ್ಯಾತ ಸ್ವಾತಂತ್ರ್ಯ ಹೋರಾಟಗಾರ ಮತ್ತು ಶಿಕ್ಷಣತಜ್ಞ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನದಂದೂ ಅವರಿಗೆ ಗೌರವ ಸಲ್ಲಿಸಿದ್ದಾರೆ.
ಮಾಳವೀಯ ಅವರ ಅಪ್ರತಿಮ ವ್ಯಕ್ತಿತ್ವ ಮತ್ತು ಕಾರ್ಯವು ದೇಶದ ಪ್ರತಿ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.