ನವದೆಹಲಿ: ಹರಿಯಾಣ ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದೆ.
2006ರಲ್ಲಿ ದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಎಚ್ಎಲ್ ಪಹ್ವಾ ಅವರಿಂದ ಹರಿಯಾಣದ ಫರಿದಾಬಾದ್ನಲ್ಲಿ ಐದು ಎಕರೆ ಕೃಷಿ ಭೂಮಿ ಖರೀದಿಸಿ, ಅದೇ ಭೂಮಿಯನ್ನು ಫೆಬ್ರವರಿ, 2010 ರಲ್ಲಿ ಅವರಿಗೆ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್ ಶೀಟ್ನಲ್ಲಿ ಪ್ರಿಯಾಂಕಾ ಗಾಂಧಿಯ ಹೆಸರು ಉಲ್ಲೇಖಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಗಮನಾರ್ಹವೆಂದರೆ ಇದೇ ಪಹ್ವಾ ಅವರಿಂದ ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರು 2005-2006 ರಿಂದ ಅಮಿಪುರ್ ಗ್ರಾಮದಲ್ಲಿ 40.08 ಎಕರೆಯ ಮೂರು ತುಂಡು ಭೂಮಿಯನ್ನು ಖರೀದಿಸಿ ಅದನ್ನು ಡಿಸೆಂಬರ್, 2010 ರಲ್ಲಿ ಅವರಿಗೇ ಮಾರಾಟ ಮಾಡಿದ್ದಾರೆ.
ಈ ದೊಡ್ಡ ಪ್ರಕರಣವು ಪರಾರಿಯಾಗಿರುವ ಶಸ್ತ್ರಾಸ್ತ್ರ ವ್ಯಾಪಾರಿ ಸಂಜಯ್ ಭಂಡಾರಿಯನ್ನು ಒಳಗೊಂಡಿದ್ದು, ಮನಿ ಲಾಂಡರಿಂಗ್, ವಿದೇಶಿ ವಿನಿಮಯ ಮತ್ತು ಕಪ್ಪು ಹಣದ ಕಾನೂನುಗಳ ಉಲ್ಲಂಘನೆ ಮತ್ತು ಅಧಿಕೃತ ರಹಸ್ಯ ಕಾಯಿದೆ ಅಡಿ ತನಿಖೆ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.