ನವದೆಹಲಿ: ಒಟ್ಟು ರೂ.15,000 ಕೋಟಿಗೂ ಅಧಿಕ ಹೂಡಿಕೆಯ ಹಲವು ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.
ತಮ್ಮ ಭೇಟಿಯ ಮೊದಲು ಎಕ್ಸ್ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಅಯೋಧ್ಯೆ ನಗರದಲ್ಲಿ ವಿಶ್ವ ದರ್ಜೆಯ ಮೂಲಸೌಕರ್ಯಗಳನ್ನು ನಿರ್ಮಿಸಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಪ್ರಧಾನಿ ಹೇಳಿದರು.
ಬೆಳಗ್ಗೆ 11:15ಕ್ಕೆ ಪ್ರಧಾನಿ ಮೋದಿಯವರು ನವೀಕರಿಸಿದ ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸುವ ಮೂಲಕ ದಿನದ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಹೊಸ ಅಮೃತ್ ಭಾರತ್ ಮತ್ತು ವಂದೇ ಭಾರತ್ ರೈಲುಗಳಿಗೂ ಪ್ರಧಾನಮಂತ್ರಿ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 12:15ಕ್ಕೆ ನೂತನವಾಗಿ ನಿರ್ಮಿಸಿರುವ ಅಯೋಧ್ಯೆ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ.
“ನಮ್ಮ ಸರ್ಕಾರವು ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು, ಸಂಪರ್ಕವನ್ನು ಸುಧಾರಿಸಲು ಮತ್ತು ಭಗವಾನ್ ಶ್ರೀರಾಮನ ನಗರವಾದ ಅಯೋಧ್ಯೆಯ ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಲು ಸಂಕಲ್ಪ ಮಾಡಿದೆ. ಈ ದಿಶೆಯಲ್ಲಿ, ನಾನು ಹೊಸದಾಗಿ ನಿರ್ಮಿಸಲಾದ ವಿಮಾನ ನಿಲ್ದಾಣ ಮತ್ತು ಪುನರಾಭಿವೃದ್ಧಿ ರೈಲ್ವೆ ನಿಲ್ದಾಣವನ್ನು ಉದ್ಘಾಟಿಸುತ್ತೇನೆ. ಇದರೊಂದಿಗೆ, ಅಯೋಧ್ಯೆ ಮತ್ತು ಯುಪಿ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿ ನನ್ನ ಕುಟುಂಬ ಸದಸ್ಯರ ಜೀವನವನ್ನು ಸುಲಭಗೊಳಿಸುವ ಇನ್ನೂ ಅನೇಕ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡುವ ಸವಲತ್ತು ಕೂಡ ನನಗೆ ಸಿಗಲಿದೆ” ಎಂದು ಪ್ರಧಾನಿ ಮೋದಿ ಹಿಂದಿಯಲ್ಲಿ ಎಕ್ಸ್ನಲ್ಲಿ ಬರೆದಿದ್ದಾರೆ.
भगवान श्री राम की नगरी अयोध्या में विश्वस्तरीय इंफ्रास्ट्रक्चर के विकास, कनेक्टिविटी में सुधार और यहां की समृद्ध विरासत के संरक्षण के लिए हमारी सरकार कृतसंकल्प है। इसी दिशा में कल नवनिर्मित एयरपोर्ट और पुनर्विकसित रेलवे स्टेशन का उद्घाटन करूंगा। इसके साथ ही कई और विकास परियोजनाओं…
— Narendra Modi (@narendramodi) December 29, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.