ಅಯೋಧ್ಯೆ: ಶ್ರೀ ರಾಮನ ಜನ್ಮ ಕ್ಷೇತ್ರವಾದ ಅಯೋಧ್ಯೆಗೆ ಇಂದು ಭೇಟಿ ನೀಡಿರುವ ಪ್ರಧಾನಿ ಮೋದಿ ಅಲ್ಲಿ ಸಾವಿರಾರು ಕೋಟಿ ರೂಪಾಯಿ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ. ಅಯೋಧ್ಯೆ ರೈಲ್ವೆ ನಿಲ್ದಾಣವನ್ನು ಉದ್ಘಾಟಿಸಿದ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯ ದೇವಾಲಯ ನಗರದಲ್ಲಿರುವ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು.
ನಗರಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಾರ ಸಂಖ್ಯೆಯ ಬೆಂಬಲಿಗರು ಹೂವಿನ ಸುರಿಮಳೆಗೈದರು. ಜನಸಂದಣಿಯತ್ತ ಕೈ ಬೀಸುತ್ತಾ ಮೋದಿ ಮುನ್ನಡೆದರು. ಮೋದಿ ಭವ್ಯ ಸ್ವಾಗತ ಪಡೆದರು.
ಕಳೆದ ವರ್ಷ ಏಪ್ರಿಲ್ನಲ್ಲಿ ಉತ್ತರ ಪ್ರದೇಶ ಸರ್ಕಾರದೊಂದಿಗೆ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಿದ ನಂತರ ಅಯೋಧ್ಯೆಯ ಭವ್ಯ ವಿಮಾನ ನಿಲ್ದಾಣವನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ನಿರ್ಮಿಸಿದೆ.
1450 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅತ್ಯಾಧುನಿಕ ವಿಮಾನ ನಿಲ್ದಾಣದ 1 ನೇ ಹಂತವನ್ನು ಅಭಿವೃದ್ಧಿಪಡಿಸಲಾಗಿದೆ.
ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವು 6500 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದೆ, ವಾರ್ಷಿಕವಾಗಿ ಸುಮಾರು 10 ಲಕ್ಷ ಪ್ರಯಾಣಿಕರಿಗೆ ಸೇವೆ ಸಲ್ಲಿಸಲು ಸಜ್ಜುಗೊಂಡಿದೆ.
ಟರ್ಮಿನಲ್ ಕಟ್ಟಡದ ಮುಂಭಾಗವು ಮುಂಬರುವ ಅಯೋಧ್ಯೆಯ ಶ್ರೀ ರಾಮ ಮಂದಿರದ ದೇವಾಲಯದ ವಾಸ್ತುಶಿಲ್ಪವನ್ನು ಚಿತ್ರಿಸುತ್ತದೆ. ಟರ್ಮಿನಲ್ ಕಟ್ಟಡದ ಒಳಭಾಗವನ್ನು ಭಗವಾನ್ ಶ್ರೀರಾಮನ ಜೀವನವನ್ನು ಚಿತ್ರಿಸುವ ಸ್ಥಳೀಯ ಕಲೆ, ವರ್ಣಚಿತ್ರಗಳು ಮತ್ತು ಭಿತ್ತಿಚಿತ್ರಗಳಿಂದ ಅಲಂಕರಿಸಲಾಗಿದೆ.
WATCH | PM Narendra Modi inaugurates Maharishi Valmiki International Airport, redeveloped Ayodhya Dham Railway Station, and flags off new Amrit Bharat and Vande Bharat trains, propelling Ayodhya's connectivity to new heights. 🚆🛬#Ayodhya #PMModi #ConnectivityBoost… pic.twitter.com/OVTtXq25Dn
— Free Press Journal (@fpjindia) December 30, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.