ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಕಳೆದ ಹತ್ತು ವರ್ಷಗಳ ಸಾಧನೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಜನರಗೆ ವೇದಿಕೆಯೊಂದು ದೊರೆತಿದೆ. ನಮೋ ಅಪ್ಲಿಕೇಶನ್ನಲ್ಲಿ ಜನ್ಮನ್ ಸಮೀಕ್ಷೆಯನ್ನು ಆಯೋಜನೆಗೊಳಿಸಲಾಗಿದ್ದು, ಜನರು ಇದರಲ್ಲಿ ಕಳೆದ 10 ವರ್ಷಗಳಲ್ಲಿ ಭಾರತ ಸಾಧಿಸಿದ ಪ್ರಗತಿಯ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬಹುದು.
ನರೇಂದ್ರ ಮೋದಿಯವರು NaMo ಅಪ್ಲಿಕೇಶನ್ನಲ್ಲಿನ ಜನಮಾನ್ ಸಮೀಕ್ಷೆಯಲ್ಲಿ ಭಾಗಿಯಾಗುವಂತೆ ಮತ್ತು ಕಳೆದ ಹತ್ತು ವರ್ಷಗಳಲ್ಲಿ ಭಾರತ ಸಾಧಿಸಿದ ಪ್ರಗತಿಯ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಜನರಿಗೆ ಕರೆ ನೀಡಿದ್ದಾರೆ.
ಸಾಮಾಜಿಕ ಮಾಧ್ಯಮದ ಪೋಸ್ಟ್ನಲ್ಲಿ, #JanManSurvey ಎಂಬ ಹ್ಯಾಶ್ಟ್ಯಾಗ್ ಬಳಸಿ ತಮ್ಮ ಪ್ರತಿಕ್ರಿಯೆಯನ್ನು ನೇರವಾಗಿ ಅವರೊಂದಿಗೆ ಹಂಚಿಕೊಳ್ಳುವಂತೆ ಪ್ರಧಾನ ಮಂತ್ರಿ ಜನರನ್ನು ಕೇಳಿದ್ದಾರೆ.
ರಾಷ್ಟ್ರದ ಪ್ರಗತಿ ಮತ್ತು ಅಭಿವೃದ್ಧಿಯ ಬಗ್ಗೆ ಜನರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಸಮೀಕ್ಷೆಯು ಅತ್ಯುತ್ತಮ ವೇದಿಕೆಯಾಗಿದೆ ಎಂದು ಮೋದಿ ಹೇಳಿದ್ದಾರೆ.
ಸರ್ಕಾರದ ಯೋಜನೆಗಳು, ತಮ್ಮ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯಗಳು ಮತ್ತು ಸಂಸದರ ಕಾರ್ಯವೈಖರಿ ಮುಂತಾದ ಹಲವಾರು ವಿಷಯಗಳ ಬಗ್ಗೆ ಜನರು ತಮ್ಮ ಪ್ರತಿಕ್ರಿಯೆಯನ್ನು ಇದರಲ್ಲಿ ಹಂಚಿಕೊಳ್ಳಬಹುದು. ಪ್ರತಿಯೊಬ್ಬರೂ ಈ ಸಮೀಕ್ಷೆಯನ್ನು ತೆಗೆದುಕೊಂಡು ನವ ಭಾರತದ ಬೆಳವಣಿಗೆಯ ಕಥೆಯ ಭಾಗವಾಗಬೇಕೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.