ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಂದು ಜಾರಿ ನಿರ್ದೇಶನಾಲಯ ಬಂಧಿಸಬಹುದು ಎಂಬ ಊಹಾಪೋಹದ ನಡುವೆ ದೆಹಲಿ ಪೊಲೀಸರು ಮುಖ್ಯಮಂತ್ರಿ ಅವರ ಅಧಿಕೃತ ನಿವಾಸದ ಸುತ್ತ ಭದ್ರತೆ ಹೆಚ್ಚಿಸಿದ್ದಾರೆ.
ಎಎಪಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ಬಂಧನ ನಡೆಯಬಹುದು ಎಂದು ಹೇಳಿಕೆ ನೀಡಿರುವುದು ಸಾಕಷ್ಟು ಗೊಂದಲಗಳನ್ನು ಸೃಷ್ಟಿಸಿದೆ. ಆದರೆ, ಆಮ್ ಆದ್ಮಿ ಪಕ್ಷದ ಹೇಳಿಕೆಯನ್ನು ಇಡಿ ತಳ್ಳಿಹಾಕಿದೆ. ಇತ್ತೀಚಿನ ವರದಿಯ ಪ್ರಕಾರ, ಇಡಿ ಸಿಎಂ ಕೇಜ್ರಿವಾಲ್ ಅವರಿಗೆ ನಾಲ್ಕನೇ ಸಮನ್ಸ್ ನೀಡಲಿದೆ.
ಈ ನಡುವೆ, ಕೇಜ್ರಿವಾಲ್ ಮೂರು-ನಾಲ್ಕು ದಿನಗಳ ಗುಜರಾತ್ ಪ್ರವಾಸಕ್ಕೆ ಹೋಗುವ ಸಾಧ್ಯತೆಯಿದೆ ಎಂದು ಎಎಪಿ ಮೂಲಗಳು ತಿಳಿಸಿವೆ. “ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಜನವರಿ 6 ರಿಂದ 8 ರವರೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗುಜರಾತ್ಗೆ ಮೂರು ದಿನಗಳ ಭೇಟಿ ನೀಡಲಿದ್ದಾರೆ. ಅವರ ಭೇಟಿಯ ಸಮಯದಲ್ಲಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ ಮತ್ತು ರಾಜ್ಯದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರು ಜೈಲಿನಲ್ಲಿರುವ ಪಕ್ಷದ ನಾಯಕಿ ಚೈತ್ರಾ ವಾಸವ ಮತ್ತು ಅವರ ಕುಟುಂಬವನ್ನು ಭೇಟಿಯಾಗಲಿದ್ದಾರೆ” ಎಂದು ಎಎಪಿ ಹೇಳಿದೆ.
ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಇಡಿ ಇದುವರೆಗೆ ಮೂರು ಸಮನ್ಸ್ ನೀಡಿದೆ. ಮೂರು ಸಮನ್ಸ್ಗಳನ್ನು ಕೂಡ ಕೇಜ್ರಿವಾಲ್ ಉದ್ದೇಶಪೂರ್ವಕವಾಗಿದೆ ತಪ್ಪಿಸಿಕೊಂಡಿದ್ದಾರೆ. ಇಡಿ ಸಮನ್ಸ್ ಕಾನೂನು ಬಾಹಿರವಾಗಿದ್ದು, ಅವರನ್ನು ಬಂಧನಕ್ಕೆ ಒಳಪಡಿಸುವ ಸಲುವಾಗಿಯೇ ಸಮನ್ಸ್ ನೀಡಲಾಗಿದೆ ಎಂದು ಎಎಪಿ ಪ್ರತಿಪಾದಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.