ನವದೆಹಲಿ: ಭಾರತದ ಹೆಮ್ಮೆಯ ಇಸ್ರೋ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. 126 ದಿನಗಳ ಪ್ರಯಾಣದ ಬಳಿಕ ಆದಿತ್ಯ ಎಲ್1 ನೌಕೆ ತನ್ನ ನಿಗದಿತ ಗುರಿಯನ್ನು ಯಶಸ್ವಿಯಾಗಿ ತಲುಪಿದೆ.
ನಾಲ್ಕು ತಿಂಗಳುಗಳ ಪ್ರಯಾಣದ ಬಳಿಕ ಆದಿತ್ಯ ಎಲ್1 ನೌಕೆ ತನ್ನ ನಿಗದಿತ ಗಮ್ಯಸ್ಥಾನವಾದ ಭೂಮಿ ಹಾಗೂ ಸೂರ್ಯನ ನಡುವಿನ ಎಲ್1 ಅನ್ನು ಕಕ್ಷೆ ತಲುಪಿದೆ. ಈ ಮೂಲಕ ಸೂರ್ಯನ ಅಧ್ಯಯನಕ್ಕಾಗಿ ನೌಕೆಯನ್ನು ಕಳಿಸಿದ ಐದನೇ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಅಮೆರಿಕ, ಜರ್ಮನಿ, ರಷ್ಯಾ ಹಾಗೂ ಚೀನಾ ದೇಶಗಳು ನೌಕೆಯನ್ನು ಕಳಿಸಿದ್ದವು. ಯುರೋಪಿಯನ್ ಸ್ಪೇಸ್ ಏಜೆನ್ಸಿ ಕೂಡ ತನ್ನ ನೌಕೆಯನ್ನು ಕಳಿಸಿದೆ.
ಎಲ್1 ಪಾಯಿಂಟ್ ಭೂಮಿಯಿಂದ ಸೂರ್ಯನಿಗಿರುವ ಒಟ್ಟು ದೂರದಲ್ಲಿ ನೂರನೇ ಒಂದರ ಭಾಗವಾಗಿದೆ. ಇಲ್ಲಿಂದ, ಹಗಲು, ರಾತ್ರಿ ಹಾಗೂ ಗ್ರಹಣಗಳ ಅಡೆತಡೆ ಇಲ್ಲದೇ ಆದಿತ್ಯ ಎಲ್1 ನೌಕೆಯು ಸೂರ್ಯನನ್ನು ನಿರಂತರವಾಗಿ ಅಧ್ಯಯನ ಮಾಡಲಿದೆ. ಸೂರ್ಯನಲ್ಲಿ ನಡೆಯುವ ಚಟುವಟಿಕೆಗಳು ಹಾಗೂ ಅಂತರಿಕ್ಷದ ವಾತಾವರಣದ ಮೇಲೆ ಅದರ ಪರಿಣಾಮವನ್ನು ಆದಿತ್ಯ ಎಲ್1 ಅಧ್ಯಯನ ನಡೆಸಲಿದೆ. ಆದಿತ್ಯ ಎಲ್1 ನಾಲ್ಕು ಪೆಲೋಡ್ಗಳನ್ನು ಹೊಂದಿದ್ದು, ಅಲ್ಲಿಂದ ನೇರವಾಗಿ ಇಸ್ರೋಗೆ ಮಾಹಿತಿ ರವಾನಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.