ನವದೆಹಲಿ: ಭಾರತ ಜಾಗತಿಕ ವೇದಿಕೆಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸುತ್ತಿದೆ. ಇದೇ ಮೊದಲ ಬಾರಿಗೆ ಯುನೆಸ್ಕೋದ ವಿಶ್ವ ಪರಂಪರೆಯ ಸಮಿತಿಯ ಅಧ್ಯಕ್ಷನಾಗಿ ಮೊದಲ ಬಾರಿಗೆ ಅಧಿಕಾರ ವಹಿಸಿಕೊಳ್ಳಲಿದೆ. ಯುನೆಸ್ಕೋದ ಭಾರತದ ಖಾಯಂ ಪ್ರತಿನಿಧಿ ವಿಶಾಲ್ ವಿ ಶರ್ಮಾ ಅವರು ಈ ಘೋಷಣೆಯನ್ನು ಮಾಡಿದ್ದಾರೆ, ಇದು ರಾಷ್ಟ್ರದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಗೆ ಮಹತ್ವದ ಸಂದರ್ಭವನ್ನು ಗುರುತಿಸುತ್ತದೆ ಎಂದು ಅವರು ಬಣ್ಣಿಸಿದ್ದಾರೆ.
ಜುಲೈನಲ್ಲಿ ನಡೆಯಲಿರುವ ಪ್ರತಿಷ್ಠಿತ ವಿಶ್ವ ಪರಂಪರೆ ಸಮಿತಿಯ ಅಧಿವೇಶನದಲ್ಲಿ ಭಾರತವು ಪಾರಂಪರಿಕ ಸಂರಕ್ಷಣೆಯ ಜಾಗತಿಕ ಚರ್ಚೆಗಳ ಕೇಂದ್ರಬಿಂದುವಾಗಿದೆ. ಈ ಮಹತ್ವದ ಜವಾಬ್ದಾರಿಯು ಪ್ರಪಂಚದ ಸಾಂಸ್ಕೃತಿಕ ಮತ್ತು ನೈಸರ್ಗಿಕ ಸಂಪತ್ತನ್ನು ರಕ್ಷಿಸಲು ಮತ್ತು ಉತ್ತೇಜಿಸಲು ಭಾರತದ ಬದ್ಧತೆಯನ್ನು ಒತ್ತಿಹೇಳುತ್ತದೆ.
ತನ್ನ 19 ನೇ ಅಧಿವೇಶನದಲ್ಲಿ ವಿಶ್ವ ಪರಂಪರೆ ಸಮಿತಿಯು ಭಾರತದಲ್ಲಿ 46 ನೇ ಅಧಿವೇಶನವನ್ನು ನಡೆಸಲು ನಿರ್ಧರಿಸಿತ್ತು, ಈ ಹಿನ್ನೆಲೆಯಲ್ಲಿ ಜುಲೈ 21 ರಿಂದ ಜುಲೈ 31, 2024 ರವರೆಗೆ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು ಯುನೆಸ್ಕೋ ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
India to chair & host UNESCO's World Heritage Committee for the 1st time from 21st to 31st July 2024 in New Delhi: Permanent Representative of India to UNESCO, Vishal V Sharma pic.twitter.com/IhJo2lJIuC
— ANI (@ANI) January 9, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.