ನವದೆಹಲಿ: 2047 ರ ವೇಳೆಗೆ ಭಾರತವು 35 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಗುಜರಾತ್ ಒಂದೇ 3 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂದು ರಿಲಾಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಹೇಳಿದ್ದಾರೆ.
ವೈಬ್ರೆಂಟ್ ಗುಜರಾತ್ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದ ಅವರು, 2047 ರ ವೇಳೆಗೆ ಭಾರತವು 35 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವುದನ್ನು ಭೂಮಿಯ ಮೇಲಿನ ಯಾವುದೇ ಶಕ್ತಿಯು ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.
ಗುಜರಾತ್ ಬೆಳವಣಿಗೆಗೆ ರಿಲಯನ್ಸ್ ಕೊಡುಗೆಯನ್ನು ಎತ್ತಿ ತೋರಿಸಿದ ಅವರು, ಭಾರತದಾದ್ಯಂತ ವಿಶ್ವದರ್ಜೆಯ ಸವಲತ್ತು ಮತ್ತು ಸಾಮರ್ಥ್ಯಗಳನ್ನು ಸೃಷ್ಟಿಸಲು ಕಂಪನಿಯ 12 ಲಕ್ಷ ಕೋಟಿ ರೂಪಾಯಿ ಹೂಡಿಕೆಯ ಮೂರನೇ ಒಂದು ಭಾಗ ಗುಜರಾತ್ನಲ್ಲಿದೆ ಎಂದು ಅವರು ಹೇಳಿದರು.
“ಮುಂದಿನ ಹತ್ತು ವರ್ಷಗಳಲ್ಲಿ ಗಮನಾರ್ಹ ಹೂಡಿಕೆಗಳೊಂದಿಗೆ ಗುಜರಾತ್ನ ಬೆಳವಣಿಗೆಯ ಕಥೆಯಲ್ಲಿ ರಿಲಾಯನ್ಸ್ ಪ್ರಮುಖ ಪಾತ್ರವನ್ನು ವಹಿಸುತ್ತದೆ” ಎಂದು ಅವರು ಹೇಳಿದರು.
ಗ್ರೀನ್ ಎನರ್ಜಿ ನೇತೃತ್ವದ ಬೆಳವಣಿಗೆಯಲ್ಲಿ ಗುಜರಾತ್ ಅನ್ನು ಜಾಗತಿಕ ನಾಯಕನನ್ನಾಗಿ ಮಾಡಲು ರಿಲಯನ್ಸ್ ಕೊಡುಗೆ ನೀಡಲಿದೆ ಎಂದು ಅವರು ಹೇಳಿದರು. “2030 ರ ವೇಳೆಗೆ ನವೀಕರಿಸಬಹುದಾದ ಇಂಧನದ ಮೂಲಕ ಗುಜರಾತ್ನ ಅರ್ಧದಷ್ಟು ಶಕ್ತಿಯ ಅಗತ್ಯಗಳನ್ನು ಪೂರೈಸಲು ನಾವು ಸಹಾಯ ಮಾಡುತ್ತೇವೆ” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.