ಅಯೋಧ್ಯೆ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ನಡೆದ ಪ್ರಾಣ ಪ್ರತಿಷ್ಠೆಯ ಬಳಿಕ ರಾಮಮಂದಿರವನ್ನು ಇಂದು ಬೆಳಿಗ್ಗೆ ಸಾರ್ವಜನಿಕರಿಗೆ ತೆರೆಯಲಾಗಿದೆ.
ಉದ್ಘಾಟನೆಗೂ ಮುನ್ನವೇ ದೇವಸ್ಥಾನದ ಮುಂಭಾಗದಲ್ಲಿ ಜನಸಾಗರವೇ ಕಂಡುಬಂದಿದೆ. ಬೆಳಗಿನ ಜಾವ 3 ಗಂಟೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನದೊಳಗೆ ಹೋಗಲು ಜಮಾಯಿಸತೊಡಗಿದರು. ಗೇಟ್ಗಳು ಬೆಳಿಗ್ಗೆ 7 ರಿಂದ 11:30 ರವರೆಗೆ ಮತ್ತು ನಂತರ ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತವೆ.
ನಿನ್ನೆ ‘ಪ್ರಾಣ ಪ್ರತಿಷ್ಠಾ’ ವಿಧಿವಿಧಾನಗಳನ್ನು ನೆರವೇರಿಸಲಾಗಿದ್ದು, ಪ್ರಧಾನಿ ಮೋದಿ ರಾಮಲಲ್ಲಾ ವಿಗ್ರಹಕ್ಕೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಮಾರಂಭದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಟ್ವಿಟರ್ನಲ್ಲಿ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, “ಅಯೋಧ್ಯಾ ಧಾಮದಲ್ಲಿ ಶ್ರೀರಾಮಲಲಾ ಅವರ ಜೀವನದ ಅಸಾಧಾರಣ ಕ್ಷಣವು ಎಲ್ಲರನ್ನೂ ಭಾವುಕರನ್ನಾಗಿಸಲಿದೆ. ಈ ದಿವ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ನನಗೆ ಅತೀವ ಸಂತಸ ತಂದಿದೆ. ಜೈ ಸಿಯಾ ರಾಮ್!” ಎಂದಿದ್ದರು.
#WATCH | Uttar Pradesh: Security outside Shri Ram Janmabhoomi Temple in Ayodhya.
Devotees have gathered at the temple to offer prayers. pic.twitter.com/J8ZKn8PZBY
— ANI (@ANI) January 23, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.