ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ, ಉಭಯ ಸದನಗಳ ಸುಗಮ ಕಲಾಪವನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಇಂದು ಸರ್ವಪಕ್ಷ ಸಭೆಯನ್ನು ಕರೆದಿದೆ.
ನಾಳೆಯಿಂದ ಅಧಿವೇಶನ ಆರಂಭವಾಗಲಿದ್ದು, ಮುಂದಿನ ತಿಂಗಳು 9ರವರೆಗೆ ಅಧಿವೇಶನ ನಡೆಯಲಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಲೋಕಸಭೆ ಮತ್ತು ರಾಜ್ಯಸಭೆಯ ರಾಜಕೀಯ ಪಕ್ಷಗಳ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸಲಿದ್ದಾರೆ.
ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಸಂಸತ್ ಅಧಿವೇಶನ ಆರಂಭವಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಧ್ಯಂತರ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಇದು ಎರಡೇ ಅವಧಿಯ ಮೋದಿ ಸರ್ಕಾರದ ಕೊನೆಯ ಬಜೆಟ್ ಆಗಲಿದೆ. ಚುನಾವಣೆ ಸಮೀಪಿಸುತ್ತಿರುವ ಕಾರಣದಿಂದಾಗಿ ಬಜೆಟ್ನಲ್ಲಿ ಇರಬಹುದಾದ ಅಂಶಗಳ ಬಗ್ಗೆ ಸಹಜವಾಗಿಯೇ ಕುತೂಹಲ ಗರಿಗೆದರಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.