ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳಿಗೆ ಎಚ್ಚರಿಕೆ ನೀಡಿ ಕಲಾಪಕ್ಕೆ ಅಡ್ಡಿಪಡಿಸದಂತೆ ಒತ್ತಾಯಿಸಿದರು. ಸಂಸತ್ ಕಲಾಪಕ್ಕೆ ಅಡ್ಡಿಪಡಿಸುವ ಸಂಸದರು ಆತ್ಮಾವಲೋಕನ ಮಾಡಿಕೊಳ್ಳಬೇಕು, ಅಡ್ಡಿಪಡಿಸುವವರನ್ನು ಯಾರೂ ನೆನಪಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು.
ಫೆಬ್ರವರಿ 9 ರಂದು ಮುಕ್ತಾಯಗೊಳ್ಳಲಿರುವ ಅಧಿವೇಶನದಲ್ಲಿ ಫೆಬ್ರವರಿ 1 ರಂದು ಮಧ್ಯಂತರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ.
ಹೊಸ ಸರ್ಕಾರ ರಚನೆಯಾದ ನಂತರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವ ಸಂಪ್ರದಾಯವನ್ನು ನಾವು ಅನುಸರಿಸಲಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಭಾರತವು ಈಗ ಪ್ರಗತಿಯಲ್ಲಿದೆ ಮತ್ತು ಪ್ರಗತಿಯು ಎಲ್ಲರನ್ನೂ ಒಳಗೊಳ್ಳುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಬೆಳವಣಿಗೆಯ ಪಯಣ ಮುಂದುವರಿಯಲಿದೆ ಮತ್ತು ಚುನಾವಣೆಯ ನಂತರ ಸಂಪೂರ್ಣ ಬಜೆಟ್ ಮಾಡುವುದಾಗಿ ಭರವಸೆ ನೀಡಿದರು. ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಕೊನೆಗೊಳಿಸುವಾಗ ‘ರಾಮ್ ರಾಮ್’ ಎಂದರು.
Speaking at the start of the Budget Session of Parliament. May it be a productive one. https://t.co/UOeYnXDdlz
— Narendra Modi (@narendramodi) January 31, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.